9:31 AM Friday24 - May 2024
ಬ್ರೇಕಿಂಗ್ ನ್ಯೂಸ್
ಬುದ್ಧ ಪೂರ್ಣಿಮೆ: ದಕ್ಷಿಣ ಕಾಶಿ ನಂಜನಗೂಡು ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ;… ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ… ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ… ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ

20/04/2024, 15:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ
ಚುನಾವಣೆ ಹಿನ್ನೆಲೆ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತ ಪ್ರಚಾರ ನಡೆಯಿತು.
ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದ ಚುನಾವಣಾ
ಪ್ರಚಾರಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.


ಬಳಿಕ ಶಾಸಕ ದರ್ಶನ್ ಮಾತನಾಡಿ, ಕಳೆದ ಎರಡು ಬಾರಿ ನಮ್ಮ ತಂದೆಯವರನ್ನು ಬೆಂಬಲಿಸಿ ಆಶಿರ್ವದಿಸಿ ಸಂಸದರನ್ನಾಗಿ ಮಾಡಿದ್ದಿರಿ. ಅವರು ಕಾಲವಾದ ನಂತರ ನನಗೆ ದೈರ್ಯ ತುಂಬಿ ನನಗೂ ಆಶಿರ್ವದಿಸಿ ಶಾಸಕನನ್ನಾಗಿ ಮಾಡಿದ್ದೀರ. ಹಾಗಾಗಿ ನಾನು ಕೂಡ ನನ್ನ ತಂದೆಯವರಂತೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.
ಕೋವಿಡ್ ನಂತಹ ಸಂಕಷ್ಟದಲ್ಲಿ ಜನರ ಬೆಂಬಲಕ್ಕೆ ನಿಂತ ಪಕ್ಷ ಕಾಂಗ್ರೆಸ್ ಪಕ್ಷ, ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್ ಹಾಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಟ್ಟಿ ಮಹೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಹೇಶ್, ಶಂಕರ್ ಮುಖಂಡರುಗಳಾದ ಕೃಷ್ಣಪ್ಪ, ಇಂಧನ ಬಾಬು, ಬುಲೆಟ್ ಮಹಾದೇವಪ್ಪ, ಉಪ್ಪನಹಳ್ಳಿ ಶಿವಣ್ಣ, ಸುರೇಶ್, ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು