11:19 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆದ್ದರೆ ಅಂಬೇಡ್ಕರ್, ಬಸವಣ್ಣ, ಸೂಫಿ ಸಂತರ ಆಶಯ ಗೆದ್ದಂತೆ: ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ

21/04/2024, 23:37

*ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪದ್ಮರಾಜ್ ಆರ್. ಪೂಜಾರಿ ಸಮುದ್ರವಿದ್ದಂತೆ*

*ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ*

ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಗೆದ್ದರೆ ಕನಕದಾಸ, ಬಸವಣ್ಣ, ಸೂಫಿ ಸಂತರ, ಅಂಬೇಡ್ಕರ್ ಅವರ ಆಶಯ ಗೆದ್ದಂತೆ. ಹಾಗಾಗಿ ಪದ್ಮರಾಜ್ ಗೆಲ್ಲಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.
ಫರಂಗಿಪೇಟೆಯಲ್ಲಿ ಭಾನುವಾರ ನಡೆದ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪದ್ಮರಾಜ್ ಅವರ ಹಿಂದೆ ಎಲ್ಲಾ ವರ್ಗದ ಜನರೂ ಇದ್ದಾರೆ. ಹಾಗಾಗಿ ಎಲ್ಲಾ ನದಿಗಳು ಸೇರಿ ಸಮುದ್ರವಾದಂತೆ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಮನೆಮನೆಗೆ ತಲುಪಿಸಿ, ಗೆಲ್ಲಿಸಬೇಕು ಎಂದು ಅವರು ನುಡಿದರು.
ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಎಲ್ಲರಿಗೂ ತಿಳಿದ ವಿಚಾರ. ಎಲ್ಲರನ್ನು ಪ್ರೀತಿಯಿಂದಲೇ ನಡೆಸಿಕೊಡುವ ವ್ಯಕ್ತಿ. ಮತ ಹಾಕದ ಯುವಕನನ್ನು ದ್ವೇಷಿಸಲಾರರು. ಆತನ ಕೈಹಿಡಿದು ಸರಿಯಾದ ದಾರಿಯಲ್ಲಿ ನಡೆಸುವಂತಹ ವ್ಯಕ್ತಿ ಪದ್ಮರಾಜ್. ಇಂತಹ ವ್ಯಕ್ತಿ ಗೆಲ್ಲಲೇಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಬೆಲೆಯೇರಿಕೆಯಿಂದ ತತ್ತರಿಸಿರುವ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇಂದು ಐದು ಗ್ಯಾರೆಂಟಿಗಳಿಂದ ಜನರು ಸ್ವಾವಲಂಭಿಯಾಗಿದ್ದಾರೆ. ಮಹಿಳೆಯರು ಆಶಾದಾಯಕ ಜೀವನ ನಡೆಸುತ್ತಿದ್ದಾರೆ. ಜನರನ್ನು ಇನ್ನಷ್ಟು ಸಶಕ್ತರನ್ನಾಗಿಸುವ ಉದ್ದೇಶದಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡಲಿದ್ದೇವೆ ಎಂದರು.
ಇದೇ ಸಂದರ್ಭ ಗುರುಕಿರಣ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ಚಂದ್ರಪ್ರಕಾಶ್ ಶೆಟ್ಟಿ, ಚಂದ್ರಹಾಸ ಕರ್ಕೇರ, ಡಾ. ಇಫ್ತಿಕಾರ್, ಜಬ್ಬಾರ್, ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಕೆ.ಸಾಹುಲ್ ಹಮೀದ್, ವೃಂದಾ ಪೂಜಾರಿ, ಲವೀನಾ, ಎಫ್.ಎ.ಖಾದರ್, ರಶೀದಾ ಬಾನು, ಇಕ್ಬಾಲ್ ಸುಜೀರ್, ಎಫ್.ಎಂ.ಬಶೀರ್, ಜಬ್ಬಾರ್ ಮಾರಿಪಳ್ಳ, ಬುಖಾರಿ ಕುಂಪನಮಜಲು, ಹಸನಬ್ಬ ಗುಡ್ಡೆ ಮನೆ, ಮೋನಾಕ, ಸಾಹುಲ್ ಹಮೀದ್, ರಝಾಕ್, ಇಸ್ಮಾಯಿಲ್, ಭಾಸ್ಕರ್ ರೈ, ಇಸಾಕ್, ಮೋನು, ಸಲಾಂ ಮಲ್ಲಿ, ಸಮೀರ್ ಪಜೀರ್, ಇಮ್ತಿಯಾಝ್ ತುಂಬೆ, ಎಐಸಿಸಿ ವೀಕ್ಷಕ ಜೋನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು