12:17 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರೋಡ್ ಶೋ; ಅಬ್ಬರದ ಪ್ರಚಾರ

22/04/2024, 13:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾನುವಾರ ಸಂಜೆ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದರು.


ಪಟ್ಟಣಕ್ಕೆ ಬಂದ ಬಿ.ವೈ. ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಪುಷ್ಪ ವೃಷ್ಟಿ ಮಾಡುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಿದರು. ನಂತರ ವಿವಿಧ ಜಾನಪದ ಕಲಾತಂಡ ಗಳೊಂದಿಗೆ ಚಿಂತಾಮಣಿ ಗಣಪತಿ ದೇವಾಲಯದ ಮುಂಭಾಗದಿಂದ ಹೊರಟು ಆರ್. ಪಿ. ರಸ್ತೆಯ ಮೂಲಕ ನಗರದ ಬಜಾರ್ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಬಿರುಸಿನ ಮತ ಪ್ರಚಾರ ನಡೆಸಿದರು.
ಬಳಿಕ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಾಲರಾಜು ಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತಾರೆ. ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರನ್ನು ಅನುಸರಿಸಿಕೊಂಡು ಬಾಲರಾಜು ಅಭಿವೃದ್ಧಿಪಡಿಸಲಿದ್ದಾರೆ.
ಕಾಂಗ್ರೆಸ್ನವರು ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಒಂದು ಕೆಜಿಯನ್ನು ಕೊಡದೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ‌
ನರೇಂದ್ರ ಮೋದಿ ಅವರು ಐದು ಕೆಜಿ ಅಕ್ಕಿ ಕೊಟ್ಟಿದ್ದಾರೆ.
ಮನೆ ಮನೆಗೆ ಗಂಗೆ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭೀಕರ ಬರಗಾಲವಾಗಿದೆ ನಮಗೇ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ಅಂಬೇಡ್ಕರ್ ಅವರನ್ನೇ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಉಚಿತ ಕೊಡುತ್ತೇವೆ ಎಂದು ಎಲ್ಲ ದರಗಳನ್ನು ಜಾಸ್ತಿ ಮಾಡಿ
ರೈತರಿಗೆ ಬರೆ ಎಳೆಯುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಅವರಿಗೆ ತಕ್ಕ ಪಾಠ ಕಲಿಸಿ ನಮ್ಮ ಅಭ್ಯರ್ಥಿ ಬಾಲರಾಜು ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್ ಮಹೇಶ್ ಮಾತನಾಡಿ ಕಾಂಗ್ರೆಸ್ನವರು ಮಧ್ಯದ ದರ ಏರಿಕೆ ಮಾಡಿ ನಿಮ್ಮ ಗಂಡಂದಿರ ಜೇಬಿಗೆ ಕತ್ತರಿ ಹಾಕಿ ಅವರಿಂದ ತಿಂಗಳಿಗೆ 3000 ರೂಪಾಯಿ ಹೆಚ್ಚುವರಿಯಾಗಿ ಪಡೆದು ನಿಮಗೆ 2,000 ಕೊಡುತ್ತಿದ್ದಾರೆ ಅಲ್ಲದೆ ಎಲ್ಲಾ ದಿನಬಳಕೆ ವಸ್ತುಗಳ ಬೆಲೆ ಹಾಗೂ ತೆರಿಗಿ ಜಾಸ್ತಿ ಮಾಡಿದ್ದಾರೆ ತಾಯಂದಿರೇ ಎಂದು ತಮ್ಮದೇ ದಾಟಿಯಲ್ಲಿ ವಿವರಿಸಿ ಭಾರತದ ಆರ್ಥಿಕ ಹಾಗೂ ಅಭಿವೃದ್ಧಿ ಪಥವನ್ನು ವೇಗವಾಗಿ ಕೊಂಡೊಯ್ಯಲು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಅವರ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸಿ ಕೊಡುವಂತೆ ಮನವಿ ಮಾಡಿಕೊಂಡರು
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ತುಲನೆ ಮಾಡಿ ಮತ ನೀಡಿ ಎಂದು ಅಭ್ಯರ್ಥಿ ಬಾಲರಾಜ್ ಪರ ಮೆಚ್ಚುಗೆಯ ಮಾತುಗಳನ್ನಾಡಿದರು.
ನಂಜನಗೂಡು ಪಟ್ಟಣವು ಸೇರಿದಂತೆ ತಾಲೂಕಿನ ವಿವಿದೆಡೆಯಿಂದ ತಮ್ಮ ನೆಚ್ಚಿನ ಯುವ ನಾಯಕನನ್ನು ನೋಡಲು ಸಾವಿರಾರು ಕಾರ್ಯಕರ್ತ ಮುಖಂಡರು ರೋಡ್ ಶೋನಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಬಾಲರಾಜ್, ಮಾಜಿ ಶಾಸಕರಾದ ಹರ್ಷವರ್ಧನ್, ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಹದೇವಯ್ಯ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್,ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕ ರಂಗನಾಯಕ,ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ಸಿದ್ದರಾಜು, ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಮಾಜಿ ಅಧ್ಯಕ್ಷ ಮಹೇಶ್ ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ನಗರಸಭಾ ಸದಸ್ಯ ಮಹದೇವಪ್ರಸಾದ್, ಬಸವಣ್ಣ, ಗುರುಸ್ವಾಮಿ, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು