1:45 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ದ.ಕ. ಲೋಕಸಭಾ ಕ್ಷೇತ್ರ: 18,18,127 ಮತದಾರರು, 1,876 ಮತಗಟ್ಟೆಗಳು, 9 ಮಂದಿ ಅಭ್ಯರ್ಥಿಗಳು

24/04/2024, 20:07

ಮಂಗಳೂರು(reporterkarnataka.com):ಇದೇ ಏ. 26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ.
ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳಿದ್ದು, 524 ಸರ್ವಿಸ್ ವೋಟರ್ ಗಳು ಸೇರಿದಂತೆ ಒಟ್ಟು 18,18,127 ಮಂದಿ ಮತದಾರರಿದ್ದಾರೆ. 2,251 ಪ್ರಿಸೈಡಿಂಗ್ ಅಧಿಕಾರಿಗಳು, 2,251 ಎಪಿಆರ್‌ಓಗಳು, 4,502 ಪಿಓಗಳು, 2,251 ಗ್ರೂಪ್ ಡಿ ನೌಕರರು ಸೇರಿದಂತೆ ಒಟ್ಟಾರೆ 11,255 ಅಧಿಕಾರಿ, ಸಿಬ್ಬಂದಿಗಳು ಈ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
40 ಸಖಿ, ವಿಕಲಚೇತನರೇ ನಿರ್ವಹಿಸುವ 8, ವಿಷಯಾಧಾರಿತ 8, ಯುವ ಮತದಾರರ 8 ಹಾಗೂ ಪಾರಂಪರಿಕತೆ ಬಿಂಬಿಸುವ 8 ಬೂತ್ ಗಳು ಸೇರಿದಂತೆ ಒಟ್ಟಾರೆ 72 ಮಾದರಿ ಮತಗಟ್ಟೆಗಳನ್ನು ಈ ಬಾರಿ ನಿರ್ಮಿಸಲಾಗಿದೆ, ವಿಕಲಚೇತನರೇ ನಿರ್ವಹಿಸುವ ಮತಗಟ್ಟೆಗಳಿಗೆ ಪ್ರತ್ಯೇಕ ವಾಹನಗಳ ವ್ಯವಸ್ಥೆ ಮಾಡಲಾಗಿದೆ, 1,876 ಮತಗಟ್ಟೆಗಳ ಪೈಕಿ 1,005 ಬೂತ್ ಗಳು ನಿರ್ದಿಷ್ಟ ಪ್ರದೇಶದಲ್ಲಿವೆ, 938 ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ, 50 ಲೊಕೇಶನ್ ಗಳಲ್ಲಿ 132 ಪೋಲಿಂಗ್ ಸ್ಟೇಷನ್ ಬರಲಿದ್ದು, 200 ಮೈಕ್ರೋ ಒಬ್ಸರ್ವೆರ್ ಗಳನ್ನು ನೇಮಕ ಮಾಡಲಾಗಿದೆ, ಒಟ್ಟು 171 ಕ್ರಿಟಿಕಲ್ ಮತಗಟ್ಟೆಗಳನ್ನು ಗುರುತಿಸಲಾಗಿದೆ.
72 ಗಂಟೆಗಳ ಅವಧಿಯಲ್ಲಿ ಮಾದರಿ ನೀತಿ ಸಂಹಿತೆಗಾಗಿ 24 ವಿಡಿಯೋ ಸರ್ವೆಲೆನ್ಸ್ ತಂಡ, 72 ಫ್ಲೈಯಿಂಗ್ ಸ್ಕ್ವಾಡ್, 69 ಸ್ಟ್ಯಾಟಿಸ್ಟಿಕ್ಸ್ ಸರ್ವೆಲೆನ್ಸ್ ತಂಡ, 186 ಸೆಕ್ಟರ್ ಅಧಿಕಾರಿಗಳು, 8 ವಿಡಿಯೋ ವಿವಿಂಗ್ ಟೀಮ್, 8 ಮಾದರಿ ನೀತಿ ಸಂಹಿತೆ ತಂಡ, 8 ವೆಚ್ಚ ನಿರ್ವಹಣಾ ತಂಡ ಹಾಗೂ 8 ಸಹಾಯಕ ಖರ್ಚು ವೆಚ್ಚಗಳ ವೀಕ್ಷಕರನ್ನು ನಿಯೋಜಿಸಲಾಗಿದೆ.
ಮತಗಟ್ಟೆಗಳ ಮತದಾನ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿಗಳಿಗೆ ರಾತ್ರಿ ವಾತ್ಸವ್ಯಕ್ಕೆ ತೊಂದರೆಯಾಗದಂತೆ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಫಸ್ಟ್ ಏಡ್ ಕಿಟ್, ಇತರೆ ಸೌಲಭ್ಯಗಳನ್ನು ಒದಗಿಸಲಾಗಿದೆ ಹಾಗೂ ಪೋಲಿಂಗ್ ವೇಲ್ಫಿಯರ್ ನೋಡಲ್ ಆಫೀಸರ್ ಅನ್ನು ನೇಮಕ ಮಾಡಲಾಗಿದೆ.
ಚುನಾವಣಾ ಕಾರ್ಯಕ್ಕೆ 125% ಬ್ಯಾಲೆಟ್ ಯೂನಿಟ್, 125% 132% ವಿವಿಪ್ಯಾಡ್ ಗಳನ್ನು ಬಳಕೆ ಮಾಡಲಾಗುತ್ತಿದೆ.
209-ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ, 201- ಮೂಡುಬಿದರೆಗೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ, 202 ಮಂಗಳೂರು ನಗರ ಉತ್ತರಕ್ಕೆ ಸೇಂಟ್ ಅಲೋಷಿಯಸ್ ಪಿಯು ಕಾಲೇಜು ಕಟ್ಟಡ, 203- ಮಂಗಳೂರು ದಕ್ಷಿಣಕ್ಕೆ ಊರ್ವಾ ಲಾಲ್ ಭಾಗ್ ನ ಕೆನರಾ ಹೈಸ್ಕೂಲ್ ಹಾಗೂ ಹೈಯರ್ ಪ್ರೈಮರಿ ಸ್ಕೂಲ್, 204-ಮಂಗಳೂರಿಗೆ ಸಂಬಂಧಿಸಿದಂತೆ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದ ಮಾನವೀಯ ಅಧ್ಯಯನ ಶಾಸ್ತ್ರದ ವಿಭಾಗದಲ್ಲಿ, 205 ಬಂಟ್ವಾಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮದನಕಾಪುನಲ್ಲಿರುವ
ಇನ್ ಪಾಂಟ್ ಜೀಸಸ್ ಇಂಗ್ಲಿಷ್ ಮತ್ತು ಕನ್ನಡ ಮೀಡಿಯಂ ಶಾಲೆಯಲ್ಲಿ,‌ 206- ಪುತ್ತೂರಿಗೆ ಸಂಬಂಧಿಸಿದಂತೆ ತೆಂಕಿಲದಲ್ಲಿರುವ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಹಾಗೂ 207 ಸುಳ್ಯಗೆ ಸಂಬಂಧಿಸಿದಂತೆ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮಾಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್ ಕೇಂದ್ರಗಳನ್ನು ಗುರುತಿಸಲಾಗಿದೆ.
ಮತಗಟ್ಟೆಗಳಲ್ಲಿ ಮತದಾರರ ಸಹಾಯ ಕೇಂದ್ರ ಸೌಲಭ್ಯಕ್ಕಾಗಿ ಪ್ರತಿ ಮತಗಟ್ಟೆಗಳಲ್ಲಿ ಮತದಾರರ ಕ್ರಮ ಸಂಖ್ಯೆ ಮತ್ತು ಮತಗಟ್ಟೆಗಳನ್ನು ಗುರುತಿಸಲು ಸಹಾಯವಾಗುವಂತೆ ಬಿಎಲ್ ಓ ಅವರನ್ನು ಒಳಗೊಂಡ ಮತದಾರರ ಸಹಾಯ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯ ಎಲ್ಲಾ 1,876 ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲಾಗಿದೆ ಎಂದರು.
ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ
ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 1,406 ನೌಕರರ ಪೈಕಿ 1,052 ಮಂದಿ ಇದುವರೆಗೂ ಮತ ಚಲಾಯಿಸಿದ್ದಾರೆ.
ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ತಮ್ಮ ಕ್ಷೇತ್ರದ ಮತದಾರರು ತಮ್ಮ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡರೆ ಎಲೆಕ್ಷನ್ ಡ್ಯೂಟಿ ಸರ್ಟಿಫಿಕೇಟ್ ಮೂಲಕ ಲೋಕಸಭಾ ಕ್ಷೇತ್ರದ ಯಾವುದೇ ಮತಗಟ್ಟೆಯಲ್ಲಿ ಮತಯಂತ್ರದ ಮೂಲಕ ಮತ ಚಲಾಯಿಸಲು ಚುನಾವಣಾ ನಿಯಮಗಳ ಪ್ರಕಾರ ಅವಕಾಶವಿದೆ ಈ ವರ್ಗದಲ್ಲಿ ಚುನಾವಣಾ ಕಾರ್ಯನಿರತ ಸಿಬ್ಬಂದಿ, ಪೊಲೀಸರು, ಸೆಕ್ಟರ್ ಅಧಿಕಾರಿಗಳು, ವಿಡಿಯೋ ಗ್ರಾಫರ್ಗಳು, ಡ್ರೈವರ್ ಹಾಗೂ ಕಂಡಕ್ಟರ್ ಗಳಿಗೆ ಅವಕಾಶ ನೀಡಿದೆ. ಅವರು ಮತಗಟ್ಟೆಯಲ್ಲಿ ಅಥವಾ ಲೋಕಸಭಾ ಕ್ಷೇತ್ರದ ಯಾವುದೇ ಮತಗಟ್ಟೆಯಲ್ಲಿ ಮತಚಲಾಯಿಸಬಹುದಾಗಿದೆ ಒಟ್ಟಾರೆ 9,900 ಮಂದಿಗೆ ಇಡಿಸಿಯನ್ನು ವಿತರಿಸಲಾಗಿದೆ.
ಮನೆಮನೆ ಮತದಾನದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರ ಪೈಕಿ 5,878 ಮಂದಿ ಮತಚಲಾಯಿಸಿದ್ದರೆ. 1,975 ವಿಕಲಚೇತನ ಮತದಾರರ ಪೈಕಿ 1,929 ಮಂದಿ ಮತಚಲಾಯಿಸಿರುತ್ತಾರೆ.
ಎವಿಇಎಸ್ ವರ್ಗದಲ್ಲಿ 15 ಇಲಾಖೆಗಳ ಅಗತ್ಯ ಸೇವೆಗಳು ಎಂದು ಗುರುತಿಸಲಾಗಿದ್ದು, ಆಯಾ ಇಲಾಖೆಗಳ ಅಧಿಕಾರಿಗಳು ಮತಚಲಾಯಿಸಲು ಪ್ರತಿ ಜಿಲ್ಲೆಯಲ್ಲಿ ಪೊಸ್ಟಲ್ ವೋಟಿಂಗ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ.
ಈ ರೀತಿಯ ಒಟ್ಟು 182 ಮಂದಿ ಮತದಾರರ ಪೈಕಿ 100 ಮಂದಿ ಮತ ಚಲಾಯಿಸಿರುತ್ತಾರೆ.
ಏಪ್ರಿಲ್ 26ರ ಬೆಳಿಗ್ಗೆ 7 ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಈಗಾಗಲೇ ಮನೆ ಮನೆಗೆ
ವೋಟರ್ ಸ್ಲಿಪ್ ಅನ್ನು ವಿತರಿಸಲಾಗಿದೆ, ಅದರೊಂದಿಗೆ ಮತದಾರರು ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು ಮತದಾರರು ಎಪಿಕ್ ಕಾರ್ಡ್ ತೋರಿಸಿ ಮತದಾನ ಮಾಡಬಹುದು ಹಾಗೂ ಎಪಿಕ್ ಕಾರ್ಡ್ ಹೊರತುಪಡಿಸಿ ಕೇಂದ್ರ ಚುನಾವಣಾ ಆಯೋಗವು ನಿಗದಿಪಡಿಸಿರುವ ಆಧಾರ್ ಕಾರ್ಡ್, ಎಂಜಿ ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್ ಬುಕ್, ಅಂಚೆ ವಿಮೆ, ಚಾಲನ ಪರವಾನಿಗೆ, ಪಾನ್ ಕಾರ್ಡ್, ಆರ್ ಜಿ ಐ ನೀಡಿರುವ ಸ್ಮಾರ್ಟ್ ಕಾರ್ಡ್, ಪಾಸ್ಪೋರ್ಟ್, ಪಿಂಚಣಿ ದಾಖಲಾತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸೇವಾ ಗುರುತಿನ ಚೀಟಿ, ಎಂಪಿ, ಎಂ ಎಲ್ ಎ, ಎಂಎಲ್ಸಿ ಅವರಿಗೆ ವಿತರಿಸಲಾಗಿರುವ ಅಧಿಕೃತ ಗುರುತಿನ ಚೀಟಿಗಳು, ಯುನಿಕ್ ಡಿಸಬೆಲಿಟಿ ಐಡಿ ಕಾರ್ಡ್ ತೋರಿಸಿ ಮತ ಚಲಾಯಿಸಬಹುದಾಗಿದೆ. ಇದೇ ಮೊದಲ ಬಾರಿಗೆ ಬಳಸಿ ಮಂಗಳೂರು ನಗರ ಉತ್ತರ ಹಾಗೂ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಮತದಾರರು ಮತದಾನ ಕೇಂದ್ರದ ಮಾಹಿತಿಯನ್ನು ಪಡೆಯಬಹುದಾಗಿದೆ ವೋಟರ್ ಗೈಡ್ ಮತ್ತು ಮೊದಲನೇ ಬಾರಿಗೆ ಮತದಾನ ಮಾಡುವ ಯುವ ಮತದಾರರಿಗೆ ಚುನಾವಣಾ ಅಧಿಕಾರಿಗಳಿಂದ ಪರ್ನನಲೈಸ್ಡ್ ಲೆಟರ್ ಗಳನ್ನು ಸಹ ನೀಡಲಾಗುತ್ತದೆ.
ಮತಗಟ್ಟೆಯ 200 ನೂರು ಮೀಟರ್ ಪ್ರದೇಶದ ಒಳಗೆ ಅಭ್ಯರ್ಥಿಗಳ ಚುನಾವಣಾ ಬೂತ್ ಸ್ಥಾಪಿಸಲು ಅವಕಾಶವಿರುವುದಿಲ್ಲ ಮತ್ತು ಚುನಾವಣಾ ಸಂಬಂಧಿಸಿದ ಪ್ರಚಾರ ಅಥವಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಮತದಾನದ ದಿನದಂದು ಮತಗಟ್ಟೆಯೊಳಗೆ ಮೊಬೈಲ್ ಫೋನ್ ಗಳನ್ನು ಚುನಾವಣಾ ಕರ್ತವ್ಯ ಅಧಿಕಾರಿ ಹೊರತುಪಡಿಸಿ ಉಳಿದವರು ಕೊಂಡೊಯ್ಯುವಂತಿಲ್ಲ ಅಲ್ಲದೆ ಮತದಾರರಿಗೆ ಮತಗಟ್ಟೆಗಳಲ್ಲಿಯೇ ಮೊಬೈಲ್ ಫೋನ್ ಇರಿಸಲು ಮೊಬೈಲ್ ಫೋನ್ ಡೆಪಾಸಿಟರ್ ಸೆಂಟರ್ ಗಳನ್ನು ತೆರೆಯಲು ಕ್ರಮವಹಿಸಲಾಗುವುದು,
ಮತಗಟ್ಟೆಯ 100 ಮೀಟರ್ ಪ್ರದೇಶದೊಳಗೆ ಯಾವುದೇ ಚುನಾವಣಾ ಪ್ರಚಾರದ ಪೋಸ್ಟರ್, ಬ್ಯಾನರ್ ಇರುವಂತಿಲ್ಲ, ಅಂತರಾಜ್ಯ ಗಡಿ ಪ್ರದೇಶಗಳಲ್ಲಿ ಎಫ್ ಎಸ್ ಟಿ ತಂಡಗಳಿಂದ ಮತ್ತು ಚೆಕ್ ಪೋಸ್ಟ್ ಗಳಲ್ಲಿ ಎಸ್ ಎಸ್ ಟಿ ತಂಡಗಳಿಂದ ಭದ್ರತಾ ಮತ್ತು ಚುನಾವಣಾ ಅಕ್ರಮ ಚಟುವಟಿಕೆ ದೃಷ್ಟಿಯಿಂದ ಹೆಚ್ಚಿನ ಕಣ್ಗಾವಲು ಕೈಗೊಳ್ಳಲಾಗಿದೆ. ಇವಿಎಂ ಮತ್ತು ವಿವಿಪ್ಯಾಟ್ ಸಾಗಾಣಿಕ ವಾಹನಗಳಿಗೆ ಭದ್ರತಾ ಹಿತದೃಷ್ಟಿಯಿಂದ ಜಿಪಿಎಸ್ ಅಳವಡಿಸಲಾಗಿದೆ.
ಚುನಾವಣಾ ಬಹಿರಂಗ ಪ್ರಚಾರ ಮುಕ್ತಾಯವಾದ ಗಡುವಿನ ನಂತರ ಚುನಾವಣಾ ಕ್ಷೇತ್ರದ ಮತದಾರರಲ್ಲದ ರಾಜಕೀಯ ಕಾರ್ಯಕರ್ತರು ಆ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅದರಂತೆ 17 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಮತದಾರರಲ್ಲದ ಹೊರಗಿನ ರಾಜಕೀಯ ಕಾರ್ಯಕರ್ತರು, ಮುಖಂಡರು ಬಹಿರಂಗ ಪ್ರಚಾರದ‌ ಗಡುವು ಮುಕ್ತಾಯವಾದ ನಂತರ ಕ್ಷೇತ್ರದಲ್ಲಿ ಇರುವಂತಿಲ್ಲ. ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷದವರು ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನದ ವ್ಯವಸ್ಥೆ ಮತ್ತು ತಿಂಡಿ, ಊಟದ ವ್ಯವಸ್ಥೆ ಮಾಡುವಂತಿಲ್ಲ, ಯಾವುದೇ ಪಕ್ಷ ಅಥವಾ ಯಾವುದೇ ಅಭ್ಯರ್ಥಿಯು ವಿವಿಧ ಜಾತಿಗಳು ಮತ್ತು ಸಮುದಾಯಗಳು, ಧರ್ಮ ಮತ್ತು ಭಾಷೆಗಳ ಜನರ ನಡುವೆ ಭಿನಾಭಿಪ್ರಾಯವನ್ನು ಹೆಚ್ಚಿಸುವ ಅಥವಾ ದ್ವೇಷ ಭಾವನೆ ಮೂಡಿಸುವ ಬಿಗುವಿನ ವಾತಾವರಣ ಸೃಷ್ಟಿಸುವಂತಹ ಯಾವುದೇ ಕಾರ್ಯಗಳನ್ನು ಮಾಡುವಂತಿಲ್ಲ.
ಮತದಾನದ ದಿನದಂದು ಏ. 26ರಂದು ವೇತನ ಸಹಿತ ರಜೆಯನ್ನು ಸರ್ಕಾರ ಘೋಷಿಸಿದ್ದು, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ, ನೌಕರರು ಮತದಾನ ಮಾಡಬಹುದಾಗಿದೆ. ಏ. 24ರ ಸಂಜೆ 6 ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆ ನಿಷೇಧವಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪ್ರತಿ ವಿಧಾನಸಭಾ ಕ್ಷೇತ್ರವಾರು ಮತಗಟ್ಟೆ ಕಾರ್ಯ ಪೂರ್ಣಗೊಂಡು ಡಿ ಮಾಸ್ಟರಿಂಗ್ ಕಾರ್ಯ ಪೂರ್ಣಗೊಂಡ ನಂತರ ಡಿ ಮಾಸ್ಟರಿಂಗ್ ಕೇಂದ್ರಗಳಿಂದ ಇವಿಎಂ, ವಿವಿಪ್ಯಾಟ್ ಮತ್ತು ದಾಖಲೆಗಳನ್ನು ಮತ ಎಣಿಕೆ ಕೇಂದ್ರವಾದ ಸುರತ್ಕಲ್ ನ ಎನ್ಐಟಿಕೆಯಲ್ಲಿ ದಾಸ್ತಾನಿ ಇರಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು