2:17 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ನಂಜನಗೂಡು: ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ

24/04/2024, 12:27

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ತಾಲೂಕು ಆಡಳಿತ ಭಾಗದ ಮುಂಭಾಗದಲ್ಲಿ ಜಮಾಯಿಸಿದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಹೋಗಿ ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ ಲಿಂಗಾಯಿತ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಸವಣ್ಣ ಮಾತನಾಡಿ, ಹುಬ್ಬಳ್ಳಿಯಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಮಾಡಲಾಗಿದೆ. ಆರೋಪಿಯ ಪರ ಸರ್ಕಾರ ನಿಂತಿದೆ. ಕೂಡಲೇ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಆತನ ಆಸ್ತಿಯನ್ನು ವಶಪಡಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯನ್ನು ಕರೆದು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಅವರ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು