2:47 PM Thursday9 - May 2024
ಬ್ರೇಕಿಂಗ್ ನ್ಯೂಸ್
ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರಕಾರ: 3,454 ಕೋಟಿ ಘೋಷಣೆ

27/04/2024, 14:22

ಹೊಸದಿಲ್ಲಿ(reporterkarnataka.com): ಬರ ಪರಿಹಾರ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಹೋರಾಟ ಮಾಡಿ ಜಯಗಳಿಸಿದ ರಾಜ್ಯ ಸರಕಾರಕ್ಕೆ ಮತ್ತೊಂದ ಜಯ ಪ್ರಾಪ್ತಿಯಾಗಿದೆ. ಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ.
ಹಲವು ಹೋರಾಟಗಳ ಬಳಿಕ, ರಾಜ್ಯಕ್ಕೆ ಇದೀಗ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಘೋಷಿಸಿದೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಪಡೆಯಲು
ರಾಜ್ಯ ಹಲವು ಹೋರಾಟ ಮಾಡಿ, ಕೊನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು. ಕೇಂದ್ರ ಸರಕಾರ ಸೋಮವಾರದೊಳಗಾಗಿ ಬರ ಪರಿಹಾರ ನಿಡುವುದಾಗಿ ತಿಳಿಸಿತ್ತು. ಇದೀಗ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರವನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿನ ಭೀಕರ ಬರ, ಕುಡಿಯುವ ನೀರಿಗೆ ಹಾಹಾಕಾರ, ರೈತರು, ಜನರು, ಜಾನುವಾರುಗಳಿಗೂ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿಯೇ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. 18,174 ಕೋಟಿ ಬರ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು