1:32 PM Monday13 - May 2024
ಬ್ರೇಕಿಂಗ್ ನ್ಯೂಸ್
ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ…

ಇತ್ತೀಚಿನ ಸುದ್ದಿ

ಮೀಸಲಾತಿಗೆ ಸಂಘ ಪರಿವಾರ ಎಂದೂ ವಿರೋಧ ಇಲ್ಲ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತೆ ಸ್ಪಷ್ಟನೆ

28/04/2024, 16:07

ಹೈದರಾಬಾದ್ (reporterkarnataka.com): ಕೆಲವು ಗುಂಪುಗಳಿಗೆ ಮೀಸಲಾತಿ ನೀಡುವುದನ್ನು ಸಂಘ ಪರಿವಾರ ಎಂದಿಗೂ ವಿರೋಧಿಸಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಭಾನುವಾರ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ಮೀಸಲಾತಿಗಳನ್ನು ಎಲ್ಲಿಯವರೆಗೆ ಅಗತ್ಯವಿದೆಯೋ ಅಲ್ಲಿಯವರೆಗೆ ವಿಸ್ತರಿಸಬೇಕು ಎಂದು ಸಂಘವು ಅಭಿಪ್ರಾಯಪಟ್ಟಿದೆ ಎಂದರು.
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾಗವತ್ ಅವರು ಆರೆಸ್ಸೆಸ್ ನಿಲುವನ್ನು ಪುನರುಚ್ಚರಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಭಾಗವತ್ ಅವರು ಕಳೆದ ವರ್ಷ ನಾಗ್ಪುರದಲ್ಲಿ ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ಹೇಳಿದ್ದರು.
ಸಮಾಜದಲ್ಲಿ ಅಗೋಚರವಾಗಿದ್ದರೂ ತಾರತಮ್ಯವಿದೆ ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು