7:26 AM Tuesday14 - May 2024
ಬ್ರೇಕಿಂಗ್ ನ್ಯೂಸ್
ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ…

ಇತ್ತೀಚಿನ ಸುದ್ದಿ

ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

28/04/2024, 22:47

ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ. ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದಕ್ಕೆ ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಕೆಟ್ಟದಾಗಿ ಸೋತರು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೀಗ ಬೆಳಗಾವಿಯಲ್ಲಿ ಮಂಗಲಾ‌ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ? ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ‌ ಮಂತ್ರಿ ಆಗಿದ್ರು, ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ, ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದೆಯಾ? ಮೋದಿ ಕಂಡ್ರೆ ಅವ್ರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು