2:11 PM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ಹಾಸನದ ಅಶ್ಲೀಲ ವೀಡಿಯೊ ಪ್ರಕರಣ: ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

29/04/2024, 12:24

ಬೆಂಗಳೂರು(reporterkarnataka.com): ಹಾಸನದ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಸಂಬಂಧಿಸಿದ ಲೈಂಗಿಕ ಹಗರಣದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.
ಈ ಕುರಿತು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮ ಅವರು ಪತ್ರಿಕಾ ಪ್ರಕಟನೆ ಹೊರಡಿಸಿ,
ದೇಶದಾದ್ಯಂತ ವೈರಲ್ ಆಗುತ್ತಿರುವ ಹಾಸನ ರಾಜಕಾರಣಿಯ ಪೆನ್ ಡ್ರೈವ್ ವೀಡಿಯೋ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ಇದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಂತೆ, ಓರ್ವ ಜನಸೇವಕನಾಗಿ ಮಹಿಳಾ ಸುರಕ್ಷತೆಯನ್ನು ಖಾತರಿಪಡಿಸಬೇಕಾದ ರಾಜಕಾರಣಿಗಳ ಸುಪರ್ದಿಯಲ್ಲೂ ಹೆಣ್ಣು ಸುರಕ್ಷಿತಳಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ.
ತಾನೋರ್ವ ಘನತೆವೆತ್ತ ಸ್ಥಾನದಲ್ಲಿರುವ ಜನಪ್ರತಿನಿಧಿ ಎಂಬುದನ್ನು ಮರೆತು, ಆಮಿಷ, ಬೆದರಿಕೆಗಳ ಮೂಲಕ
ಸುಮಾರು ಎರಡು ಸಾವಿರದಷ್ಟು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿದ್ದೇ ಅಲ್ಲದೆ, ಅದನ್ನು ಸ್ವತಃ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದಿರುವ ಈ ರಾಜಕಾರಣಿಯನ್ನು ಬಂಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯವೊದಗಿಸಬೇಕು. ಹೆಣ್ಣನ್ನು ಕೇವಲ ಭೋಗದ ವಸ್ತುವಾಗಿಸಿ, ಆಕೆಯ ಸ್ವಾಭಿಮಾನ, ಘನತೆ, ಗೌರವಗಳೊಂದಿಗೆ ಚೆಲ್ಲಾಟವಾಡಿರುವ ಈ ಅಪ್ರಬುದ್ಧ ರಾಜಕಾರಣಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವೀಡಿಯೋವನ್ನು ಪೆನ್ ಡ್ರೈವಿನಿಂದ ಪ್ರಸಾರ ಮಾಡಿದವರನ್ನೂ ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಇದಕ್ಕಾಗಿ ವಿಶೇಷ ಕ್ಷಿಪ್ರ ತನಿಖಾ ತಂಡ ರಚಿಸಿ ಸಂತ್ರಸ್ತರಿಗೆ ಅಗತ್ಯ ಕಾನೂನು ಸಹಕಾರ, ಭದ್ರತೆ ಖಾತ್ರಿಪಡಿಸಬೇಕು. ವೈರಲ್ ಆಗುತ್ತಿರುವ ವೀಡಿಯೋ ಪ್ರಸಾರವನ್ನು ತಕ್ಷಣ ತಡೆಹಿಡಿಯುವ ವ್ಯವಸ್ಥೆಯನ್ನು ಮಾಡಬೇಕೆಂದು ಫಾತಿಮಾ ನಸೀಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು