10:03 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ

07/05/2024, 21:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.


ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.
ಬಳಿಕ ತಾಲ್ಲೂಕು ನಾಯಕರ ಸಂಘದ ಗೌರವಾಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಸಿ. ಚಿಕ್ಕರಂಗನಾಯಕ ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರು ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಹರಿಕಾರ, ಚಿಂತಕ, ಸಾಮಾಜಿಕ ಸುಧಾರಕ ಎಂದರೆ ತಪ್ಪಾಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದರು ಸಾಮಾಜಿಕ ನ್ಯಾಯಕ್ಕೆ ದುಡಿದು ಮೊಟ್ಟಮೊದಲ ಬಾರಿಗೆ ನಂಜನಗೂಡಿನ ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದರು. ಹೇಳಿದ ಕೆಲಸವನ್ನು ಚಾಚು ತಪ್ಪದೇ ಮಾಡುತ್ತಿದ್ದರು. ತಳ ಸಮುದಾಯಕ್ಕೆ ಮೊದಲ ಆದ್ಯತೆ ನೀಡಿ ಪ್ರತಿ ಸಮುದಾಯಕ್ಕೂ ನಂಜನಗೂಡಿನಲ್ಲಿ ಭವನ ನಿರ್ಮಾಣ ಮಾಡಲು ಸ್ಥಳವಕಾಶ ಮಾಡಿಕೊಟ್ಟು ನಿವೇಶನಗಳನ್ನು ನೀಡಿದ್ದಾರೆ. ಬುದ್ಧ ಬಸವ ಅಂಬೇಡ್ಕರ್ ಅವರ ಅನುಯಾಯಿಯಾಗಿ ಆದರ್ಶವನ್ನು ರೂಪಿಸಿಕೊಂಡಿದ್ದರು. ಅವರು ನಮ್ಮೊಟ್ಟಿಗೆ ಇಲ್ಲದಿದ್ದರೂ ಅವರು ಬದುಕಿದ ಬದುಕು ಇನ್ನು ಜೀವಂತವಾಗಿದೆ ಎಂದು ಸ್ಮರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಖಜಾಂಚಿ ರಂಗಸ್ವಾಮಿ, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಗ್ರೆಸ್ ಮುಖಂಡ ದೊರೆಸ್ವಾಮಿ ನಾಯಕ, ಮುಖಂಡರಾದ ಹಳ್ಳದಕೇರಿ ನಾಗರಾಜು, ಹೆಡತಲೆ ನಾಗರಾಜು, ಬಿಜೆಪಿ ಎಸ್ಟಿ ಮೋರ್ಚಾ ನಗರಾಧ್ಯಕ್ಷ ಸುದೇಂದ್ರ ಕುಮಾರ್, ಮಾಜಿ ತಾಪಂ ಸದಸ್ಯರಾದ ಕೆ.ಡಿ ಮಂಜು, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು