6:18 AM Monday20 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ, ಶೋಷಿತರ ಪರ ಗಟ್ಟಿಧ್ವನಿ ವಸಂತ ಬಂಗೇರ ಇನ್ನಿಲ್ಲ: ಪಾರ್ಥಿವ ಶರೀರ ನಾಳೆ ಬೆಳ್ತಂಗಡಿಗೆ

08/05/2024, 19:51

ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ(79) ಅನಾರೋಗ್ಯದಿಂದ ಬುಧವಾರ ನಿಧನರಾದರು‌.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಸಂಜೆ 4 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
1983ರ ವಿಧಾನ ಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. 1985ರಲ್ಲಿ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಅವರು ಮತ್ತೆ ಬಿಜೆಪಿಯಿಂದ ಆಯ್ಕೆಗೊಂಡಿದ್ದರು. ಹೀಗೆ ಒಟ್ಟು 5 ಬಾರಿ ಶಾಸಕರಾಗಿದ್ದರು. 2013ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮತ್ತೆ ಸ್ಪರ್ಧಿ ಸಿದರೂ ಬಿಜೆಪಿ ಅಭ್ಯರ್ಥಿ ಎದುರು ಸೋಲು ಅನುಭವಿಸಿದರು.
ಹಿಂದುಳಿದ ವರ್ಗದ, ಬಡವರ, ಶೋಷಿತರ ಪರ ಅವರು ಗಟ್ಟಿ ಧ್ವನಿಯಾಗಿದ್ದರು. ಸೌಜನ್ಯ ಪರ ಹೋರಾಟದಲ್ಲಿಯೂ ಸಕ್ರೀಯರಾಗಿದ್ದರು. ನೇರ ನಡೆ ನುಡಿಯ ಅವರು ನಿಷ್ಠುರವಾದಿಯಾಗಿದ್ದರು.
ವಸಂತ ಬಂಗೇರ ಅವರ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ ಬೆಳ್ತಂಗಡಿಗೆ ತರಲಾಗುವುದು. ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು