5:03 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

2025 ಮಾರ್ಚ್ ಒಳಗೆ ಮಂಗಳೂರು ಸಮಗ್ರ ಚಿತ್ರಣವೇ ಬದಲಾಗಲಿದೆ: ಶಾಸಕ ವೇದವ್ಯಾಸ ಕಾಮತ್

18/01/2023, 19:50

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ (ಎಂಎಸ್‌ಸಿಎಲ್‌), ಮಂಗಳೂರು ಮಹಾನಗರ
ಪಾಲಿಕೆ ಹಾಗೂ ಸರ್ಕಾರದ ಅನುದಾನದ ಕಾಮಗಾರಿಗಳೆಲ್ಲವೂ 2025ರ ಮಾರ್ಚ್‌ವೊಳಗೆ ಪೂರ್ಣಗೊಳ್ಳಲಿದ್ದು, ನಗರದ ಸಮಗ್ರ ಚಿತ್ರಣವೇ ಬದಲಾಗಲಿದೆ’ ಎಂದು ಶಾಸಕ ಡಿ. ವೇದವ್ಯಾಸ
ಕಾಮತ್ ಹೇಳಿದರು.

ನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಲ್ಕೂವರೆ ವರ್ಷಗಳಲ್ಲಿ 4,750 ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ, ಕೈಗೆತ್ತಿಕೊಂಡ ಬಹುತೇಕ ಕಾಮಗಾರಿಗಳನ್ನು ನಿರೀಕ್ಷೆಯಂತೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ’ ಎಂದು
ಶಾಸಕರು ನುಡಿದರು.

ವಿವಿಧ ಕಾಮಗಾರಿಗಳನ್ನು 2023 ರ ಮಾರ್ಚ್‌ ಒಳಗೆ ಪೂರ್ಣ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಇದು ಸಾಧ್ಯವಾಗಿಲ್ಲ. ಮೂರು ವರ್ಷ ಮಳೆಗಾಲದಲ್ಲಿ ಉಂಟಾದ ಪ್ರವಾಹಗಳು, ಎರಡು ವರ್ಷ ಕೋವಿಡ್‌ ಕಾರಣದಿಂದ ಕಾಮಗಾರಿ ವಿಳಂಬವಾಗಿವೆ ಎಂದು ತಿಳಿಸಿದರು.
‘ಜಲಸಿರಿ ಯೋಜನೆ ಅಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸುತ್ತಿದ್ದೇವೆ. ಪ್ರಸ್ತುತ ತುಂಬೆಯಿಂದ ನಗರಕ್ಕೆ ಪೂರೈಕೆಯಾಗುವ ನೀರಿನಲ್ಲಿ ಶೇ 40 ರಿಂದ ಶೇ 50ರಷ್ಟು ಸೋರಿಕೆ ಆಗುತ್ತಿದೆ. ಅದನ್ನು ಪತ್ತೆ ಹಚ್ಚಲೂ ಸಾಧ್ಯವಾಗುತ್ತಿಲ್ಲ. ಜಲಸಿರಿ ಯೋಜನೆ ಅಡಿ ನಗರದಲ್ಲಿ ಕುಡಿವ ನೀರು ಪೂರೈಕೆ ಎಲ್ಲ ಕೊಳವೆಗಳನ್ನು ಬದಲಾಯಿಸುತ್ತಿದ್ದೇವೆ. ಈ ಯೋಜನೆ ಪೂರ್ಣಗೊಂಡ ಬಳಿಕ ನೀರು ಸೋರಿಕೆ ಪ್ರಮಾಣ ಶೇ 8ಕ್ಕಿಂತ ಕಡಿಮೆ ಆಗಲಿದೆ ಎಂದು ಹೇಳಿದರು.
ಜಲಸಾರಿಗೆ ಮಂಡಳಿ (ಮೆರಿಟೈಮ್‌ ಬೋರ್ಡ್‌) ಮೂಲಕ ಮೀನುಗಾರಿಕಾ ಬಂದರಿನ ಡಕ್ಕೆಯ ಮೂರನೇ ಹಂತದ ಅಭಿವೃದ್ಧಿಗೆ ₹ 49 ಕೋಟಿ ಅನುದಾನ ಬಿಡುಗಡೆಯಾಗಿದೆ. 7 ಮೀಟರ್ ಆಳದವರೆಗೆ ಹೂಳೆತ್ತುವ ಕಾಮಗಾರಿಯನ್ನು ₹ 29 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಿಂದ ಭಾರಿ ಗಾತ್ರದ ಹಡಗುಗಳೂ ಮೀನುಗಾರಿಕಾ ಬಂದರಿಗೆ ಬರುವುದಕ್ಕೆ ಅವಕಾಶ ಸಿಗಲಿದೆ’ ಎಂದರು.
‘ಎರಡು ಕುದ್ರುಗಳನ್ನು ₹20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹೊಯ್ಗೆ ಬಜಾರ್‌ನಿಂದ ನೇತ್ರಾವತಿ ನದಿಯಲ್ಲಿ ಸಾಗಿ ಕೂಳೂರುವರೆಗೆ ತಲುಪುವ ಬಾರ್ಜ್‌ ಪ್ರಯಾಣ ಆರಂಭಿಸಲಿದ್ದೇವೆ. ಇದರಿಂದ ಜನರ ಓಡಾಟ ಮತ್ತು ವಾಹನಗಳ ಸಾಗಾಟಕ್ಕೂ ಅವಕಾಶ ಸಿಗಲಿದೆ. ಈ ಜಲಮಾರ್ಗದಲ್ಲಿ ಬೋಟ್‌ ನಿಲುಗಡೆಗಾಗಿ ಐದು ಕಡೆ ಸಣ್ಣ ಜೆಟ್ಟಿ ನಿರ್ಮಿಸಲಾಗುತ್ತದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು