7:33 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದ್ದು, ಎಷ್ಟು ಕಡೆ ದಲಿತ ಸಿಎಂ ಇದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪ್ರಶ್ನೆ

16/07/2021, 21:30

ಮಂಗಳೂರು(reporterkarnatakanews): ಕಾಂಗ್ರೆಸ್‌ನಲ್ಲಿ ಯಾರನ್ನು ಮುಖ್ಯ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.
2023ರ ಚುನಾವಣೆಗೆ ಕಾಂಗ್ರೆಸ್ ನಿಂದ  ದಲಿತ ಸಿಎಂ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ನೀಡಿರುವ ಹೇಳಿಕೆಗೆ ಹರೀಶ್ ಕುಮಾರ್ ನಗರದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದರು.
ಕಾಂಗ್ರೆಸ್‌  ಎಲ್ಲ ವರ್ಗದವರಿಗೂ ಸಿಎಂ ಆಗುವ ಅವಕಾಶವನ್ನು ನೀಡಿದೆ. ಆದರೆ ಬಿಜೆಪಿಯಲ್ಲಿ ಸಿಎಂ ಆಗಿ ಬಿಎಸ್‌ವೈ ಹಾಗೂ ಜಗದೀಶ್ ಶೆಟ್ಟರ್ ಇಬ್ಬರೂ ಲಿಂಗಾಯಿತ ವರ್ಗದವರು ಹಾಗೂ ಕೇವಲ 11 ತಿಂಗಳು ಒಕ್ಕಲಿಗ ಸಮುದಾಯದ ಡಿ.ವಿ. ಸದಾನಂದ ಗೌಡ ಅವರಿಗೆ ಅವಕಾಶ ನೀಡಿದೆ.ಅದನ್ನು ಬಿಟ್ಟರೆ ಬೇರೆ ಯಾವ ಸಮುದಾಯಕ್ಕೂ ಸಿಎಂ ಆಗಿ ಅವಕಾಶವನ್ನು ನೀಡಿಲ್ಲ.ದೇಶದ 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು, ಎಷ್ಟು ರಾಜ್ಯಗಳಲ್ಲಿ ದಲಿತ ಸಿಎಂ ಇದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪ್ರಶ್ನಿಸಿದರು.

2023ರಲ್ಲಿ ನಡೆಯುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬರುವುದಿಲ್ಲ ಎಂದು ಬಿಜೆಪಿಯವರಿಗೆ ತಿಳಿದಿದ್ದು, ಆದುದರಿಂದಲೇ ರಾಜ್ಯಾಧ್ಯಕ್ಷರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯಾಧ್ಯಕ್ಷರು ದ.ಕ. ಜಿಲ್ಲೆಯ ಸಂಸದರೂ ಆಗಿದ್ದು, ಜಿಲ್ಲೆಯಲ್ಲಿ ಪ್ರತೀ ವರ್ಷ ಮಳೆಗೆ ರೈಲ್ವೆ ರಸ್ತೆಗೆ ಮಣ್ಣು ಕುಸಿಯುತ್ತಿದೆ. 10 ವರ್ಷಗಳ ಕಾಲ ಕೆಲಸ ಮಾಡಿ ನಂತರ ಉದ್ಘಾಟನೆಯಾದ ಪಂಪ್‌ ವೆಲ್ ಮೇಲ್ಸೆತುವೆಯ ಸರ್ವಿಸ್ ರಸ್ತೆ ಅಸಮರ್ಪಕವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿ ದೋಣಿಯಲ್ಲಿ ಸಂಚರಿಸುವ ರೀತಿಯಲ್ಲಿ ಇರುತ್ತದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಸಂಸದರ ಸುಪರ್ದಿಗೆ ಬರುತ್ತಿದ್ದು, ಅವರು ಈ ಸಮಸ್ಯೆಗಳ ಬಗ್ಗೆ ಎಚ್ಚರ ವಹಿಸಿ ಜನರ ಆತಂಕವನ್ನು ದೂರ ಮಾಡಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಅವಮಾನಿಸಿದ್ದಾರೆ. ನುಡಿದಂತೆ ನಡೆದವರು, ದಿಟ್ಟ, ನೇರ, ಮೇಧಾವಿ, ಆರ್ಥಿಕ ತಜ್ಞ ಸಿದ್ದರಾಮಯ್ಯರು ಅವರು 5 ವರ್ಷ ಆಡಳಿತ ನಡೆಸಿ ರಾಜ್ಯದ ಆರ್ಥಿಕತೆಯನ್ನು ಉಳಿಸಿದವರು. ಅವರು ಜನರ ನಂಬಿಕೆಗೆ ಅರ್ಹರಾದವರು. ಬಿಜೆಪಿ ತನ್ನ ರಾಜಕಾರಣ ಮಾಡಿ,
ಎಲ್ಲದಕ್ಕೂ ತೆರಿಗೆ ಹಾಕಿ ಜನರ ನಂಬಿಕೆಯ ವಿರುದ್ಧ ಹೋಗಿದೆ ಎಂದು ದೂರಿದರು.

ಎತ್ತಿನಹೊಳೆ- ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಲಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ನನೆಗುದಿಗೆ ಬಿದ್ದಿದ್ದ ಪಶ್ಚಿಮ ವಾಹಿನಿಯ ಎತ್ತಿನಹೊಳೆ ಯೋಜನೆಯನ್ನು ಬಜೆಟ್‌ನಲ್ಲಿ ಅನುಷ್ಠಾನಗೊಳಿಸಿ, ೨೬೦
ಕೋಟಿ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಿದ್ದರು. ಅಂದು ನಳಿನ್ ಕುಮಾರ್ ಕಟೀಲ್ ಅವರು ಅದನ್ನು ವಿರೋಧಿಸಿ ಪ್ರತಿಭಟನೆ, ಪಾದಯಾತ್ರೆ ನಡೆಸಿದ್ದರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಬೀದರ್-ಕೋಲಾರದಲ್ಲಿ ನನ್ನ ಬೆಂಬಲ ಎತ್ತಿನಹೊಳೆ ಯೋಜನೆಗೆ ಇದೆ. ನನ್ನಿಂದ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಂದ ಈ ಯೋಜನೆ ಆಗಿದೆ ಎಂದು ಹೇಳುತ್ತಿದ್ದಾರೆ. ಸಂಸದರು ಈ ಕೂಡಲೇ ಎತ್ತಿನಹೊಳೆ ಪರ-ವಿರೋಧವಾ ಎಂದು ತಿಳಿಸಬೇಕು.ಸಂಸದರು ದ.ಕ. ಜಿಲ್ಲೆಯ ಪರ ಇದ್ದಾರ ಇಲ್ಲವಾ ಎಂದು ತಿಳಿಸಬೇಕು ಎಂದು ಆಹ್ರಹಿಸಿದರು.ಪ್ರಮುಖರಾದ ಸದಾಶಿವ ಉಳ್ಳಾಲ, ವಿಶ್ವಾಸ್ ಕುಮಾರ್ ದಾಸ್, ಪ್ರಕಾಶ್ ಸಾಲಿಯಾನ್, ಗಣೇಶ್ ಪೂಜಾರಿ, ಶುಭೋದಯ ಆಳ್ವ, ಸುರೇಶ್ ಕೋಟೆಕಾರ್, ಅಭಿಷೇಕ್ ಉಳ್ಳಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು