ಇತ್ತೀಚಿನ ಸುದ್ದಿ
23ರಂದು ಕಡಲನಗರಿಗೆ ರಾಜ್ಯಪಾಲರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ಭಾಗಿ
21/04/2022, 10:13
ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವು ಏಪ್ರಿಲ್, 23 ರಂದು ಮಂಗಳಗಂಗೋತ್ರಿ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಕುಲಾಧಿಪತಿಗಳು ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಹ ಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ನವದೆಹಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಎಸ್.ಅಬ್ದುಲ್ ನಝೀರ್, ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ಕುಲಸಚಿವರಾದ(ಪರೀಕ್ಷಾಂಗ) ಪ್ರೊ.ಪಿ.ಎಲ್.ಧರ್ಮ, ಕುಲಸಚಿವರಾದ ಪ್ರೊ.ಸಿ.ಕೆ.ಕಿಶೋರ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.