5:29 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

26ರಂದು ಜಲಾಭಿಮುಖ ಪ್ರದೇಶ ಅಭಿವೃದ್ಧಿ ಸೇರಿದಂತೆ ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

24/02/2023, 21:05

ಮಂಗಳೂರು(reporterkarnataka.com): ಇಲ್ಲಿನ ಸ್ಮಾರ್ಟ್‌ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ.26ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ.

ಬೆಳಗ್ಗೆ 9 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದ ನೂತನ ಪೆವಿಲಿಯನ್ ಉದ್ಘಾಟನೆ ಹಾಗೂ 10 ಗಂಟೆಗೆ ನಗರದ ಹೊಗೈ ಬಜಾರ್‍ನಲ್ಲಿರುವ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲಾಭಿಮುಖ ಪ್ರದೇಶ ಅಭಿವೃದ್ಧಿ ಶಂಕು ಸ್ಥಾಪನೆ, ಸಂಜೆ 5.30ಕ್ಕೆ ಕೇಂದ್ರ ಮಾರುಕಟ್ಟೆ ಶಂಕು ಸ್ಥಾಪನೆ ಹಾಗೂ ಸಂಜೆ 6ಗಂಟೆಗೆ ಸುಲ್ತಾನ ಬತ್ತೇರಿ ಪ್ರದೇಶ ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಜೃತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ಅಧ್ಯಕ್ಷತೆ ವಹಿಸುವರು. ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಉಪಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಬೀದರ್ ನ ಕ.ಪ.ಪ.ಮೀ. ವಿ.ವಿಯ ಕುಲಪತಿ ಡಾ. ಕೆ.ಸಿ. ವೀರಣ್ಣ, ಪಾಲಿಕೆಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಕೀಲ ಕಾವ, ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ನಯನ ಆರ್. ಕೋಟ್ಯಾನ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್, ಬೋಳಾರ ಕಾರ್ಪೊರೇಟರ್ ಭಾನುಮತಿ ಹೊಗೈ ಬಜಾರ್ ಕಾರ್ಪೊರೇಟರ್ ರೇವತಿ ಶಾಮ್ ಸುಂದರ್, ಬೋಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ, ಮಣ್ಣಗುಡ್ಡ ವಾರ್ಡ್ ಕಾರ್ಪೊರೇಟರ್ ಸಂಧ್ಯಾ ಮೋಹನ್ ಆಚಾರ್ಯ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಮಂಡಳಿ ಸದಸ್ಯರು ಮತ್ತು ಮಂಗಳೂರು ನಗರಮಟ್ಟದ ಸಲಹಾ ಸಮಿತಿ ಸದಸ್ಯರು ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು