11:53 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

262 ಸರಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಎಲ್ ಕೆಜಿ, ಯುಕೆಜಿ ಆರಂಭ: ರಾಜ್ಯ ಸರಕಾರ ಮಹತ್ವದ ನಿರ್ಧಾರ

01/09/2023, 14:49

ಬೆಂಗಳೂರು(reporterkarnataka.com): ರಾಜ್ಯದಲ್ಲಿ 262 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ(ಪೂರ್ವ ಪ್ರಾಥಮಿಕ) ಶಾಲಾ ತರಗತಿಗಳನ್ನು ಸೆಪ್ಟೆಂಬರ್ ತಿಂಗಳಿನಿಂದ ಪ್ರಾಯೋಗಿಕವಾಗಿ
ನಡೆಸಲು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ಶಾಲಾ ತರಗತಿಗಳನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ಸೆಪ್ಟೆಂಬರ್ ನ ಈ ತಿಂಗಳಿನಿಂದಲೇ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ವಿಶೇಷ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಎಲ್ ಕೆಜಿ ಒಂದು ವಿಭಾಗವನ್ನು ಮಾತ್ರ ಆರಂಭಿಸುವಂತೆ ಹಾಗೂ ಎಲ್ ಕೆಜಿಗೆ 4 ರಿಂದ 5 ವರ್ಷದೊಳಗಿನ ಮಕ್ಕಳನ್ನು ಮಾತ್ರ ದಾಖಲಿಸುವಂತೆ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ಪ್ರೀ ನರ್ಸರಿ ಶಾಲೆಗಳಲ್ಲಿ ಕನಿಷ್ಠ 20 ಮಕ್ಕಳನ್ನು ಮತ್ತು ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಬೇಕೆಂದು ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಪೂರ್ವ ಪ್ರಾಥಮಿಕ ಶಾಲೆಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನದವರೆಗೆ ಮಾತ್ರ ನಡೆಸುವುದು. ಆಗಸ್ಟ್ ಅಂತ್ಯದೊಳಗೆ ಶಾಲೆಗಳಿಗೆ ಸರ್ಕಾರವೇ ಪಠ್ಯ ಪುಸ್ತಕ, ಬೋಧನಾ ಸಾಮಗ್ರಿಗಳನ್ನು ಪೂರೈಸಲಿದೆ. ಈ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು. ಇವರಿಗೆ ಡಯಟ್ ಮೂಲಕ ತರಬೇತಿ ನೀಡಲಾಗುತ್ತದೆ. ಈ ಮಕ್ಕಳಿಗೆ ಅಂಗನವಾಡಿಗಳಲ್ಲಿ ನೀಡುವ ಹಾಲು, ಊಟ, ಉಪಹಾರ ನೀಡುವಂತೆಯೂ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು