5:29 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ

26/12/2024, 20:22

ಮಂಗಳೂರು(reporterkarnataka.com): 8ನೇ ವರ್ಷದ ’ಮಂಗಳೂರು ಕಂಬಳ’ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು ನಡೆಯಲಿದೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಈ ವಿಷಯ ಪ್ರಕಟಿಸಿದರು.


ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ’ಡಿ. 28ರಂದು ಬೆಳಿಗ್ಗೆ 8.30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್ ಕಂಬಳ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಹಾಗೂ ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಡಾ.ಕೆ ಪ್ರಕಾಶ್ ಶೆಟ್ಟಿ ವಹಿಸಲಿದ್ದಾರೆ.
ಮುಂದಿನ ಪೀಳಿಗೆಯ ಹಾಗೂ ಡಿಜಿಟಲ್ ಯುಗದ ಮಕ್ಕಳು ನಮ್ಮ ತುಳುನಾಡಿನ ಸಂಸ್ಕೃತಿಯ ಜೊತೆ ಜೊತೆಗೆ ಬೆಳೆಯಬೇಕು. ಏಕೆಂದರೆ, ಕಂಬಳವು ದಕ್ಷಿಣ ಕನ್ನಡದ ಕರಾವಳಿಯ ಸಂಸ್ಕೃತಿಯ ವಿಶಿಷ್ಟತೆಯ ಪ್ರತೀಕ. ಅಲ್ಲದೆ, ಮಂಗಳೂರು ಸೇರಿದಂತೆ ಕರಾವಳಿಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶದಿಂದ ಮಂಗಳೂರು ನಗರ ಭಾಗದಲ್ಲಿ ಕಳೆದ ಏಳು ವರ್ಷಗಳಿಂದ ವ್ಯವಸ್ಥಿತವಾಗಿ ಮಂಗಳೂರು ಕಂಬಳವನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ. ಈ ಬಾರಿ ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಕನೆ ಹಲಗೆ, ಅಡ್ಡ ಹಲಗೆ ಹೀಗೆ ಒಟ್ಟು 6 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.
ಕಂಬಳ ಸಮಿತಿ ಉಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಮಾತನಾಡಿ, ’ಕಂಬಳದ ಅಂಗವಾಗಿ ಕಲರ್‌ಕೂಟ ಡ್ರಾಯಿಂಗ್ ಸ್ಪರ್ಧೆ ನಡೆಯಲಿದೆ. 10 ವರ್ಷದವರೆಗಿನ ಮಕ್ಕಳು ’ರಂಗ್‌ದ ಎಲ್ಯ’, 10ರಿಂದ 15 ವರ್ಷದೊಳಗಿನ ಮಕ್ಕಳು ’ರಂಗ್‌ದ ಮಲ್ಲ’ ವಿಭಾಗದಲ್ಲಿ
ಭಾಗವಹಿಸಬಹುದು. ಇನ್ನು ರಂಗ್ ಕೂಟ ವಿಭಾಗದಲ್ಲಿ ವಯೋಮಿತಿಯ ನಿರ್ಬಂಧ ಇಲ್ಲ. ಫೋಟೊಗ್ರಾಫಿ ಸ್ಪರ್ಧೆ ಹಾಗೂ
ರೀಲ್ಸ್ ಸ್ಪರ್ಧೆಗಳು ಕೂಡ ನಡೆಯಲಿವೆ. ರೀಲ್ಸ್ ಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವಾಗ #mಚಿಟಿgಚಿಟuಡಿuಞಚಿmbಚಿಟಚಿ೮ ಹ್ಯಾಷ್ ಟ್ಯಾಗ್ ಬಳಸಬೇಕು’ ಎಂದರು.

*ಸಂಸದನಾಗಿ ಮೊದಲ ಕಂಬಳ:*
ಮಂಗಳೂರಿನಲ್ಲಿ ಕಳೆದ 7 ವರ್ಷದಿಂದ ನಮ್ಮ ತಂಡದ ಎಲ್ಲರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ಮಂಗಳೂರು ಕಂಬಳ ಆಯೋಜನೆ ಮಾಡಿದೆ. ಆದರೆ, ಸಂಸದನಾಗಿ ಇದು ನನ್ನ ಪಾಲಿಗೆ ಮೊದಲ ಕಂಬಳ ಮುನ್ನಡೆಸುವ ಅವಕಾಶ ನೀಡಿದೆ. ತುಳುನಾಡಿನ ಸಂಸ್ಕೃತಿಯ ಶ್ರೀಮಂತಿಕೆಯನ್ನು ಬಿಂಬಿಸುವ ಕಂಬಳದ ಪರಂಪರೆಯನ್ನು ದೇಶವ್ಯಾಪಿ ಹಾಗೂ ವಿಶ್ವ ಮಟ್ಟದಲ್ಲಿ ಗುರುತಿಸುವಲ್ಲಿ ಬಹುದೊಡ್ಡ ಜವಾಬ್ದಾರಿಯಿದೆ. ಹೀಗಿರುವಾಗ, ಮಂಗಳೂರು ಕಂಬಳವನ್ನು ಒಂದು ಕ್ರೀಡೆಗಿಂತ ಹೆಚ್ಚಾಗಿ ಅದರೊಂದಿಗೆ ಭಾವನಾತ್ಮಕವಾಗಿ ಬೆಳೆದು ಬಂದಿರುವ ಈ ಸಂಸ್ಕೃತಿಯನ್ನು ಮತ್ತಷ್ಟು ಕಡೆ ವ್ಯಾಪಕಗೊಳಿಸುವತ್ತ ಹೆಚ್ಚಿನ ಗಮನಹರಿಸಲಾಗುವುದು. ಆ ಮೂಲಕ 8ನೇ ಮಂಗಳೂರು ಕಂಬಳದ ಯಶಸ್ವಿ ಆಯೋಜನೆಗೆ ಪ್ರಯತ್ನಿಸಲಾಗುವುದು ಎಂದು ಸಂಸದರು ನುಡಿದರು.
*29ರಂದು ಫೈನಲ್ ಸ್ಪರ್ಧೆ:*
ಎರಡು ದಿನಗಳ ಮಂಗಳೂರು ಕಂಬಳದಲ್ಲಿ ಫೈನಲ್ ಸ್ಪರ್ಧೆ ಡಿ.29ರಂದು ಬೆಳಗ್ಗೆ. ಆದರೆ, ಕಂಬಳದ ಹತ್ತಿರದಿಂದ ಬಲ್ಲವರಿಗೆ ಹೊರತಾಗಿ ಜನಸಾಮಾನ್ಯರಿಗೆ ಭಾನುವಾರ ಕೂಡ ಕಂಬಳ ಓಟ ನಡೆಯುತ್ತದೆ ಎನ್ನುವ ಮಾಹಿತಿ ಅಷ್ಟಾಗಿ ಇರುವುದಿಲ್ಲ. ಈ ಕಾರಣಕ್ಕೆ 29ರ ಬೆಳಗ್ಗೆ ನಡೆಯುವ ಮಂಗಳೂರು ಕಂಬಳದ ಹೆಚ್ಚು ಕುತೂಹಲ ಹಾಗೂ ಆಸಕ್ತಿ ಮೂಡಿಸುವ ಫೈನಲ್ ಸ್ಪರ್ಧೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಭಾಗವಹಿಸಬಹುದು.
ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಉಪಾಧ್ಯಕ್ಷರಾದ ಅಶೋಕ್ ಕೃಷ್ಣಾಪುರ, ಪ್ರಕಾಶ್ ಗರೋಡಿ, ವಸಂತ್ ಪೂಜಾರಿ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು