9:31 PM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಮೆರವಣಿಗೆ: ಮಂಗಳೂರು ನಾಗರೀಕರು ಭಾಗವಹಿಸಲು ಕರೆ

24/05/2022, 22:07

ಮಂಗಳೂರು(reporterkarnataka.com): ಇದೇ ಮೇ 28ರ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಕರೆ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮೂರು ಹಂತದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮೇ 28ರಂದು ಮಂಗಳೂರು, ಉಳ್ಳಾಲ ಹಾಗೂ ಅಮರ ಸುಳ್ಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ, ಅಂದು ಮಂಗಳೂರು ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಗರದ ನಾಗರೀಕರು ಸಕ್ರಿಯವಾಗಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. 

ದೇಶಭಕ್ತಿ ಹಾಗೂ ದೇಶ ಪ್ರೇಮದ ಜಾಗೃತಿ ಮೂಡಿಸುವ ಮೆರವಣಿಗೆ ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಗುವುದು, ಈ ಮೆರವಣಿಗೆಯಲ್ಲಿ ನಾಗರಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. 2ರಿಂದ 3  ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಹತ್ತು ಹಲವು ಕಲಾತಂಡಗಳು, ಕಾಲೇಜು ವಿದ್ಯಾರ್ಥಿಗಳು, ಮಂಗಳೂರಿನ ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ, ಪುರಭವನದಲ್ಲಿ ಸಭಾ ಕಾರ್ಯಕ್ರಮ, ಉಪನ್ಯಾಸ, ಸ್ವಾತಂತ್ರ್ಯ ಹೋರಾಟದ ಸಾಕ್ಷ್ಯಚಿತ್ರ ಮತ್ತು ಶಿಲಾಫಲಕ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. 

ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರ ನೀಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ.ಸೋಜ, ನ್ನಡ ಸಾಹಿತ್ಯ ಪರಿಷತ್ತು, ನಾಟಕ, ಸಂಗೀತ, ಯಕ್ಷಗಾನ ಹಾಗೂ ಬೇರೆ ಬೇರೆ ಕ್ಷೇತ್ರದ ಅಧ್ಯಕ್ಷರು, ರೈತ ಸಂಘದ ಅಧ್ಯಕ್ಷರು, ಮಹಿಳಾ ಒಕ್ಕೂಟಗಳು, ಚೇಂಬರ್ ಆಫ್ ಕಾಮರ್ಸ್ ಹಾಗೂ ತುಳು ಚಿತ್ರರಂಗ ಒಕ್ಕೂಟಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು