3:37 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

34 ವರ್ಷ ಹಳೆ ಕೇಸ್!: ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧುಗೆ 1 ವರ್ಷ ಜೈಲು ಶಿಕ್ಷೆ; ಏನಿದು ಹಳೆ ಪ್ರಕರಣ?

20/05/2022, 18:50

ಹೊಸದಿಲ್ಲಿ(reporterkarnataka.com); ಬರೋಬ್ಬರಿ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

1988ರಲ್ಲಿ ಈ ಘಟನೆ ನಡೆದಿದೆ. ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣ ಇದಾಗಿದೆ. ಇದೀಗ 34 ವರ್ಷದ ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ಶಿಕ್ಷೆ ನೀಡಿದೆ.

ಏನಿದು ಹಳೆ ಪ್ರಕರಣ..?: 1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ, ಕೋರ್ಟ್‌ ಬಳಿಕ ಈ ಪ್ರಕಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಸುಪ್ರೀ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.

ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು