12:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2023, 22:14

ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ) ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.

ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ ನಡೆಯಲಿದ್ದು, ಅದರ ಉದ್ಘಾಟನೆಯನ್ನು ತಾವು ನೆರವೇರಿಸಿಕೊಡಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಹ್ವಾನಿಸಿದರು. ತಾವು ಸಮ್ಮೇಳನಕ್ಕೆ ಬರುವುದಾಗಿ ಸಮ್ಮತಿ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದರು.
*ಮೈಸೂರು ಪತ್ರಿಕಾ ಭವನಕ್ಕೆ
ಡಿ.22ರಂದು ಶಂಕುಸ್ಥಾಪನೆ:*
ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು