8:01 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ 393 ಶಾಶ್ವತ ‘ಆಶಾಕಿರಣ’ ದೃಷ್ಟಿ‌ ಕೇಂದ್ರಗಳಿಗೆ ಚಾಲನೆ: ಖುದ್ದು ಕಣ್ಣು ತಪಾಸಣೆ ಮಾಡಿಸಿಕೊಂಡ ಡಿಸಿಎಂ

03/07/2025, 17:31

*ಬೆಂಗಳೂರಿನ ಆರೋಗ್ಯ ಕ್ಷೇತ್ರ ಬಲಪಡಿಸಲು ಪ್ರತ್ಯೇಕ ಆರೋಗ್ಯ ನೀತಿ - ಸಚಿವ ದಿನೇಶ್ ಗುಂಡೂರಾವ್*

ಬೆಂಗಳೂರು(reporterkarnataka.com): ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ.
ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಒದಗಿಸುವತ್ತ 393 ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದ್ದು, ದೃಷ್ಟಿದೋಷ ಹೊಂದಿದವರು ತಪಾಸಣೆ ಮಾಡಿಸಿಕೊಂಡು, ಉಚಿತವಾಗಿ ಕನ್ನಡಕಗಳನ್ನ ಪಡೆಯಬಹುದಾಗಿದೆ. ಅಲ್ಲದೇ ಕಣ್ಣಿನ ಪೊರೆ ಶಸ್ತ್ರಚುಕಿತ್ಸೆಯನ್ನ ಉಚಿತವಾಗಿ ಕಲ್ಪಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ಕಣ್ಣಿನ ಆರೈಕೆಗೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಒಂದು ಮಾದರಿ ಯೋಜನೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಯೋಜನೆಯನ್ನ ಅಧ್ಯಯನ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಕರ್ನಾಟಕಕ್ಕೆ ತಂಡ ಕಳುಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ಧಪಡಿಸುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಶೀಘ್ರದಲ್ಲಿಯೇ ಜಾರಿಗೆ ತರುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಆಶಾಕಿರಣ ಯೋಜನೆ ನಮ್ಮ ಸರ್ಕಾರದ ದೃಷ್ಟಿ ಗ್ಯಾರಂಟಿ ಯೋಜನೆ ಎಂದು ವಿಶ್ಲೇಷಿಸಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಣ್ಣಿನ ಆರೈಕೆಯಲ್ಲಿ ಇಂದು ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರೆಯಲಾಗಿದೆ. ನಾನು ಕೂಡ ಇಂದು ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ತಪಾಸಣೆ ನಡೆಸಿಕೊಂಡಿದ್ದೇನೆ. ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ನೀಡಿದರು.‌
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ರವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ.
ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ. 4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು