5:30 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ

09/01/2024, 15:34

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಆಗಿರುವ 39ರ ಹರೆಯದ ಸುಚನಾ ಸೇಠ್ ಬಂಧಿತ ಮಹಿಳೆ. ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರ ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾನೆ.
ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ತನ್ನ 4ರ ಹರೆಯದ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊಟೇಲ್ ನಿಂದ ಹೊರಬಂದಿದ್ದಳು. ಹೊಟೇಲ್ ಸಿಬ್ಬಂದಿಗಳು
ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.
ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು