9:14 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

04/03/2024, 20:06

ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ‌. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಠಾಣಾ ಅಕ್ರ 39/2018 ಕಲಂ: 379, 392, 397, 411, 414 ಐಪಿಸಿ ಮತ್ತು ಕೊಣಾಜೆ ಪೊಲೀಸ್ ಠಾಣಾ ಅಕ್ರ: 68/2018 ಕಲಂ: 379 ಮತ್ತು 4, 5, 7, 8, 9, 11,12 ಗೋ ಹತ್ಯೆ ನಿಷೇದ ಕಾಯ್ದೆಯಂತೆ ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಉಳ್ಳಾಲ ತಾಲೂಕು ನಾಟೆಕಲ್ ಎಂಬಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ನಿರ್ದೇಶನದಂತೆ, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರುಗಳಾದ ಸಿದ್ದಾರ್ಥ ಗೋಯಲ್ ಹಾಗೂ
ದಿನೇಶ್ ಕುಮಾರ್ ಅವರ ಮಾರ್ಗದರ್ಶನ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯಾ ಎನ್. ನಾಯಕ ಮತ್ತು ಕೊಣಾಜೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರವೀಂದ್ರ ಸಿ ಮುಂದಾಳತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್., ಪುನೀತ್ ಗಾಂವಕಾರ್ ಸಿಬ್ಬಂದಿಗಳು
ಪತ್ತೆ ಮಾಡಿ ದಸ್ತಗಿರಿ ಮಾಡಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು