9:55 PM Wednesday12 - March 2025
ಬ್ರೇಕಿಂಗ್ ನ್ಯೂಸ್
ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ…

ಇತ್ತೀಚಿನ ಸುದ್ದಿ

ಶಿಕ್ಷಣ ಕ್ಷೇತ್ರದಲ್ಲಿ 40 ವರ್ಷಗಳ ನಿರಂತರ ಸೇವೆ: ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

12/03/2025, 21:45

ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಜಯಾನಂದ ಪೆರಾಜೆಯವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘವು ನೀಡುವ ರಾಷ್ಟ್ರೀಯ ಪ್ರಶಸ್ತಿ ಶಿಕ್ಷಣ ಸೌರಭ 2025ಕ್ಕೆ ಶಿಕ್ಷಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ್ ಲಂಬಾಣಿ ತಿಳಿಸಿದ್ದಾರೆ.
ಶಿಕ್ಷಕರಾಗಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿರುವ ಅವರನ್ನು ರಾಜ್ಯ ಸಮಿತಿಯಲ್ಲಿ ಆಯ್ಕೆ ಮಾಡಿದೆ. ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಮಾ. 16ರಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.
ಜಯಾನಂದ ಪೆರಾಜೆ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಲ್ಲಿ 34 ವರ್ಷ ಕನ್ನಡ ಭಾಷಾ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ಅತ್ಯುತ್ತಮ ಶಿಕ್ಷಕರಾಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಪಾತ್ರರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬಂಟ್ವಾಳ ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧ್ಯಕ್ಷರಾಗಿ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಬರಹಗಾರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ನಾಯಕತ್ವ ವಹಿಸಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ರಾಜ್ಯಾದ್ಯಂತ ಕನ್ನಡ ಸಾಹಿತಿಗಳ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲರಾಗಿದ್ದಾರೆ.
ಹಿರಿಯ ಪತ್ರಕರ್ತರಾಗಿರುವ ಅವರು ಕನ್ನಡ ಪಠ್ಯ ಪುಸ್ತಕದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಅಂತಾರಾಷ್ಟ್ರೀಯ ಜೇಸಿ ಸಂಸ್ಥೆಯ ರಾಜ್ಯ ತರಬೇತುದಾರರಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಹಲವಾರು ಸಾಹಿತ್ಯ ಗೋಷ್ಠಿಗಳನ್ನು ಸಂಘಟನೆ ಮಾಡಿರುವುದಲ್ಲದೆ ಕವಿಗೋಷ್ಠಿ, ವಿಚಾರ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಭಾವಬಿಂದು ಕವನ ಸಂಕಲವನ್ನು ಪ್ರಕಟಿಸಿ ಸೃಜನಶೀಲ ಕವಿಯಾಗಿ ಗುರುತಿಸಲ್ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು