12:25 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಶಿಕ್ಷಣ ಕ್ಷೇತ್ರದಲ್ಲಿ 40 ವರ್ಷಗಳ ನಿರಂತರ ಸೇವೆ: ಶಿಕ್ಷಣ ಸೌರಭ ರಾಷ್ಟ್ರ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

12/03/2025, 21:45

ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಜಯಾನಂದ ಪೆರಾಜೆಯವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘವು ನೀಡುವ ರಾಷ್ಟ್ರೀಯ ಪ್ರಶಸ್ತಿ ಶಿಕ್ಷಣ ಸೌರಭ 2025ಕ್ಕೆ ಶಿಕ್ಷಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ್ ಲಂಬಾಣಿ ತಿಳಿಸಿದ್ದಾರೆ.
ಶಿಕ್ಷಕರಾಗಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿರುವ ಅವರನ್ನು ರಾಜ್ಯ ಸಮಿತಿಯಲ್ಲಿ ಆಯ್ಕೆ ಮಾಡಿದೆ. ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಮಾ. 16ರಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.
ಜಯಾನಂದ ಪೆರಾಜೆ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಲ್ಲಿ 34 ವರ್ಷ ಕನ್ನಡ ಭಾಷಾ ಶಿಕ್ಷಕರಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ, ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸುವ ಮೂಲಕ ಅತ್ಯುತ್ತಮ ಶಿಕ್ಷಕರಾಗಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಪಾತ್ರರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರು ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಬಂಟ್ವಾಳ ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧ್ಯಕ್ಷರಾಗಿ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಬರಹಗಾರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ನಾಯಕತ್ವ ವಹಿಸಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ರಾಜ್ಯಾದ್ಯಂತ ಕನ್ನಡ ಸಾಹಿತಿಗಳ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ರೀಯಾಶೀಲರಾಗಿದ್ದಾರೆ.
ಹಿರಿಯ ಪತ್ರಕರ್ತರಾಗಿರುವ ಅವರು ಕನ್ನಡ ಪಠ್ಯ ಪುಸ್ತಕದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಅಂತಾರಾಷ್ಟ್ರೀಯ ಜೇಸಿ ಸಂಸ್ಥೆಯ ರಾಜ್ಯ ತರಬೇತುದಾರರಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಹಲವಾರು ಸಾಹಿತ್ಯ ಗೋಷ್ಠಿಗಳನ್ನು ಸಂಘಟನೆ ಮಾಡಿರುವುದಲ್ಲದೆ ಕವಿಗೋಷ್ಠಿ, ವಿಚಾರ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಭಾವಬಿಂದು ಕವನ ಸಂಕಲವನ್ನು ಪ್ರಕಟಿಸಿ ಸೃಜನಶೀಲ ಕವಿಯಾಗಿ ಗುರುತಿಸಲ್ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು