8:48 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

45 ಲಕ್ಷ ರೂ. ವೆಚ್ಚದಲ್ಲಿ ಮಹಮಾಯಿ ದೇವಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

11/08/2021, 21:52

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ರಥಬೀದಿ ಮಹಮಾಯಿ ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕರು, ರಥಬೀದಿ ಮಹಮ್ಮಾಯಿ ಕೆರೆಯು ಅತ್ಯಂತ ಪುರಾತನ ಕೆರೆಯಾಗಿದ್ದು, ವರ್ಷಂಪ್ರತಿ ಗಣೇಶೋತ್ಸವ ಮತ್ತು ದಸರಾ ಸಂದರ್ಭದಲ್ಲಿ ನೂರಾರು ವಿಗ್ರಹಗಳನ್ನು ಕೆರೆಯಲ್ಲಿ ವಿಸರ್ಜಿಸಲಾಗುತ್ತಿದೆ. ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶೀಘ್ರದಲ್ಲೇ ಕೆರೆಯ ನವೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. 

ಬೆಳೆಯುತ್ತಿರುವ ನಗರದಲ್ಲಿ ಈ ಹಿಂದಿನ ಕಾಲದಲ್ಲಿ ಸಮೃದ್ಧವಾಗಿದ್ದ ಕೆರೆಗಳು ಜೀರ್ಣಾವಸ್ಥೆ ತಲುಪಿದ್ದು ಅವುಗಳೆಲ್ಲವನ್ನೂ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕೆಲವೊಂದು ಕೆರೆಗಳನ್ನು ಗುರುತಿಿದ್ದು ಅವುಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ‌ರ ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ದೇವಸ್ಥಾನದ ಪ್ರಮುಖರಾದ ಗೋವಿಂದ ಪೈ, ಶ್ರೀನಿವಾಸ್ ಎಸ್.ಕಾಮತ್, ಮಾರೂರು ಸುಧೀರ್ ಪೈ, ಪ್ರಕಾಶ್ ಕಾಮತ್, ಎಂ. ನಾಗೇಶ್ ಭಟ್, ಅರ್ಚಕರಾದ ಎಂ. ವಿಠಲ್ ಭಟ್, ಎಂ ಶಿವಾನಂದ ಭಟ್,ಎಂ ವಿವೇಕ್ ಭಟ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಸುರೇಶ್ ವಿ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು