6:49 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

4ರ ಹರೆಯದ ಪುತ್ರನ ಕೊಂದ ಸ್ಟಾರ್ಟ್‌ ಅಪ್‌ ಕಂಪನಿ ಸಿಇಒ ಸುಚನಾಳಿಗೆ ಪೊಲೀಸ್ ಕಸ್ಟಡಿ: ಪತಿಯ ಮೇಲಿನ ಕೋಪಕ್ಕೆ ಮಗು ಬಲಿ

09/01/2024, 18:14

ಪಣಜಿ(reporterkarnataka.com): ತನ್ನ ನಾಲ್ಕು ವರ್ಷದ ಪುತ್ರನನ್ನು ಕೊಂದ ಹಂತಕಿ ಮೈಂಡ್ ಫುಲ್ ಎಐ ಲ್ಯಾಬ್ ಸ್ಟಾರ್ಟ್‌ ಅಪ್‌ ಕಂಪನಿಯ ಸಿಇಒ ಸುಚನಾಳನ್ನು ಗೋವಾ ಕೋರ್ಟ್‌ 6 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.
ಗೋವಾದ ಮಾಪುಸಾ ಕೋರ್ಟ್‌ ಗೆ ಹಂತಕಿ ಸುಚನಾಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.
ಗೋವಾದಲ್ಲಿರುವ ಹೋಟೆಲ್‌ನಲ್ಲಿ ತನ್ನ ಸ್ವಂತ ಮಗನನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿ ರವಾನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದರು. ಕಾರಿನ ಡಿಕ್ಕಿಯಲ್ಲಿದ್ದ ಸೂಟ್‌ಕೇಸ್‌ ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿತ್ತು.
ಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಗೋವಾ ಪೊಲೀಸರು ಆರೋಪಿ ಸುಚನಾ ಅವರನ್ನು ವಶಕ್ಕೆ ಪಡೆದು ಗೋವಾಕ್ಕೆ ಕರೆದೊಯ್ದಿದ್ದರು.
ಪತಿ ಮೇಲಿನ ಕೋಪದಿಂದ ತಾನು ಮಗನನ್ನು ಕೊಂದಿರುವುದಾಗಿ ಸುಚನಾ ಪ್ರಾಥಮಿಕ ತನಿಖೆ ವೇಳೆ ಪೊಲೀಸರಿಗೆ ತಿಳಿದ್ದಾಳೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು