4:22 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಸಜೆ; ಉಡುಪಿ ಪೋಕ್ಸೋ ಕೋರ್ಟ್ ನಿಂದ ತೀರ್ಪು 

26/10/2021, 21:14

ಉಡುಪಿ(reporterkarnataka.com): ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಆರೋಪಿಗೆ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ವೆಂಕಟೇಶ(30) ಎಂಬಾತ ಶಿಕ್ಷೆಗೊಳಗಾದ ಅಪರಾಧಿ.ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಘಟನೆ ವಿವರ: ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಈ ಘಟನೆ ನಡೆದಿತ್ತು. ಪ್ರಸ್ತುತ ಅಪರಾಧಿಯಾದ ವೆಂಕಟೇಶ್ ಮನೆಗೆ ಆಟ ಆಡಲೆಂದು ಬಂದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಮಗು ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತವಾಗಿ ಅನಾರೋಗ್ಯಕ್ಕೀಡಾದಾಗ ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ‌ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮಗು ತನ್ನ‌ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ದೂರುದಾರರು ನೀಡಿದ  ದೂರಿನಂತೆ ಕಾರ್ಕಳ ಠಾಣೆಯ ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಶಿಕ್ಷೆ ಪ್ರಮಾಣ: ನ್ಯಾಯಾಲಯದಲ್ಲಿ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿ ವಿಚಾರಣೆ ನಡೆದಿದ್ದು ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿದ್ದು ಅಪರಾಧಿ ವೆಂಕಟೇಶನಿಗೆ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ  10 ವರ್ಷ ಕಠಿಣ ಸಜೆ, 20 ಸಾವಿರ ದಂಡ (ದಂಡದ ಮೊತ್ತದಲ್ಲಿ 15  ಸಂತ್ರಸ್ತೆಗೆ, 5 ಸಾವಿರ ಸರಕಾರಕ್ಕೆ), ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು