8:22 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್‌ | ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್

06/03/2026, 11:24

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ರಾಜ್ಯದ ನಿರುದ್ಯೋಗಿ ಯುವಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಬರೋಬ್ಬರಿ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವುದು ಮತ್ತು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ, ಸರ್ಕಾರವು ವಯೋಮಿತಿಯಲ್ಲಿ 5 ವರ್ಷಗಳ ಕಾಲ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ.
ಕಳೆದ ಕೆಲ ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿದ್ದ ಮತ್ತು ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಈ ನಿರ್ಧಾರವು ದೊಡ್ಡ ಆಸರೆಯಾಗಲಿದೆ. ಈ ನೇಮಕಾತಿ ಯೋಜನೆಯು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಉದ್ಯೋಗ ಸೃಷ್ಟಿಯ ನಿಟ್ಟಿನಲ್ಲಿ ಇದೊಂದು ಐತಿಹಾಸಿಕ ಹೆಜ್ಜೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು