12:52 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

6 ರಾಜ್ಯಗಳ ಸಿಎಂ ಜತೆ ಜು.16ರಂದು ಪ್ರಧಾನಿ ಮೋದಿ ಮಹತ್ವದ ಸಭೆ: 19ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

13/07/2021, 16:23

ನವದೆಹಲಿ(reporterkarnataka news): ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 16ರಂದು ಕರ್ನಾಟಕ ಸೇರಿದಂತೆ 6 ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯದ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರು 6 ರಾಜ್ಯಗಳ ಸಿಎಂ ಜತೆ ಸದ್ಯದ ಕೊರೊನಾ ಪರಿಸ್ಥಿತಿ ಮತ್ತು ಮುಂದೆ ಬರಬಹುದಾದ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.

ಜುಲೈ 16ರ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಾಲ್ಗೊಳ್ಳಲಿದ್ದಾರೆ. ಜತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು. ರಾಜ್ಯದಲ್ಲಿ ಇದೇ 19ರಂದು ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.

ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.

ಮಂಗಳವಾರ ಈಶಾನ್ಯದ 8 ರಾಜ್ಯಗಳ ಜೊತೆ ಪ್ರಧಾನಿ ಚರ್ಚೆ ನಡೆಸಿದ್ದು, ಹಲವು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು