11:18 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

6 ರಾಜ್ಯಗಳ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ: ಜೂನ್ 23ರಂದು ಮತದಾನ 

26/05/2022, 13:29

ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ವಿಧಾನಸಭೆ ಉಪ ಚುನಾವಣೆ ದಿನಾಂಕ ಘೋಷಿಸಿ

ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 23ರಂದು ಮತದಾನ ನಡೆಯಲಿದೆ.

ಪಂಜಾಬ್ ನ ಸಂಗ್ರೂರ್, ಉತ್ತರ ಪ್ರದೇಶದ ರಾಮ್ ಪುರ್, ಅಜಾಮ್ ಘರ್, ತ್ರಿಪುರದಾ ಅಗರ್ತಲಾ, ಬದ್ರೋಲಿ ನಗರ, ಸುಮಾ, ಜುಬರ್ಜಾ ನಗರ್, ಆಂಧ್ರಪ್ರದೇಶದ ಅಟ್ಮಾಕೂರ್, ನವದೆಹಲಿಯ ರಜಿಂದೇರ್ ನಗರ್ ಹಾಗೂ ಜಾರ್ಖಡ್ ನ ಮಾಂದ್ರಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಮೇ 30ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಜೂನ್ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಜೂನ್ 7ರಂದು ನಡೆಯಲಿದೆ. ಜೂನ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 23, 2022ರಂದು ಮತದಾನ ನಡೆಯಲಿದೆ. ಜೂನ್ 26ರಂದು ಮತಏಣಿಕೆ ಕಾರ್ಯ ನಡೆಯಲಿದೆ. ಜೂನ್ 28, 2022ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು