7:46 PM Saturday19 - April 2025
ಬ್ರೇಕಿಂಗ್ ನ್ಯೂಸ್
Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ…

ಇತ್ತೀಚಿನ ಸುದ್ದಿ

60 ಪರ್ಸೆಂಟ್‌ ವಸೂಲಿಯ ನೆನಪಿನ ಜಾತ್ರೆ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಲೇವಡಿ

21/01/2025, 19:28

ಬೆಂಗಳೂರು(reporterkarnataka.com): ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀ, ರಾಹುಲ್‌ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್‌ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್‌ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆ? ಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದು ಅವರು ನುಡಿದರು.
*ಕ್ಷಮೆ ಯಾಚಿಸಿ:*
ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸಂಘಟನಾ ಸಭೆ ನಡೆದಿದ್ದು, ತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವ್ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ವರಿಷ್ಠರ ಜೊತೆ ಮಾತನಾಡಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು