6:45 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್ ಸೂಚನೆ

01/01/2026, 11:54

- ಎಸ್‌ಸಿಪಿ–ಟಿ‌ಎಸ್‌ಪಿ ಯೋಜನೆ 6,322 ಕುಟುಂಬಗಳಿಗೆ ಸೌಲಭ್ಯ

- ಅಂತರ್ಜಲ ವೃದ್ಧಿಗೆ ಆದ್ಯತೆ: ಚೆಕ್ ಡ್ಯಾಮ್ ಮತ್ತು ಏತ ನೀರಾವರಿ ಯೋಜನೆಗೆ ಒತ್ತು

- ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು

ಬೆಂಗಳೂರು(reporterkarnataka.com): ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

*6,322 ಕುಟುಂಬಗಳಿಗೆ ಲಾಭ:*
“2025–26ನೇ ಆರ್ಥಿಕ ಸಾಲಿನಲ್ಲಿ ಎಸ್‌ಸಿಪಿ–ಟಿ‌ಎಸ್‌ಪಿ ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು,” ಎಂದು ಸಚಿವರು ನಿರ್ದೇಶನ ನೀಡಿದರು.

*ಜಲ ಸಂರಕ್ಷಣೆಗೆ ವಿಶೇಷ ಒತ್ತು:*
ಅಂತರ್ಜಲ ಮಟ್ಟವನ್ನು ವೃದ್ಧಿಸುವ ದೃಷ್ಟಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ‘ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

*ಕಳೆದ ವರ್ಷದ ಸಾಧನೆ:*
2024–25ನೇ ಸಾಲಿನಲ್ಲಿ ₹365 ಕೋಟಿ ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು