ಇತ್ತೀಚಿನ ಸುದ್ದಿ
7 ದಿನಗಳ ನಿರಂತರ ನೃತ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಕುಡ್ಲದ ಕುವರಿಗೆ ರೋಹನ್ ಕಾರ್ಪೋರೇಶನ್ ಗೌರವ ಸನ್ಮಾನ
03/08/2025, 13:12

ಮಂಗಳೂರು(reporterkarnataka.com): ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ್ಮಾನಿಸಿದೆ.
ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊ ಅವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
“ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಎಂದು ಡಾ.ರೋಹನ್ ಮೊಂತೇರೊ ಹೇಳಿದರು.
ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.