8:24 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

7 ರಾಜ್ಯಗಳ 13 ಕ್ಷೇತ್ರಗಳ ಉಪ ಚುನಾವಣೆ: ಎನ್ ಡಿಎಗೆ ಹೀನಾಯ ಸೋಲು; 10 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು

13/07/2024, 20:39

ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಭಾರೀ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. 13 ಸ್ಥಾನಗಳ ಪೈಕಿ 10 ಸ್ಥಾನ ಗಳನ್ನು ಇಂಡಿಯಾ ಮೈತ್ರಿಕೂಟ ಗೆದ್ದಿದೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಮೈತ್ರಿಕೂಟ ಕೇವಲ 2 ಸ್ಥಾನ ಗಳನ್ನು ಮಾತ್ರ ಪಡೆದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿದ್ದಾರೆ.
ಬಿಹಾರದಲ್ಲಿ ಸ್ವತಂತ್ರ ಅಭ್ಯರ್ಥಿ ರುಪೌಲಿ ಗೆದ್ದಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಐಎನ್‌ಸಿ ಡೆಹ್ರಾ ಮತ್ತು ನಲಗಢವನ್ನು ಗೆದ್ದರೆ, ಬಿಜೆಪಿ ಹಮೀರ್‌ಪುರದಲ್ಲಿ ಜಯಗಳಿಸಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಮರವಾರ ಗೆದ್ದಿದೆ. ಪಂಜಾಬ್‌ನಲ್ಲಿ ಎಎಪಿ ಜಲಂಧರ್ ಪಶ್ಚಿಮದಲ್ಲಿ ಗೆದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆ ವಿಕ್ರವಾಂಡಿಯಲ್ಲಿ ಗೆದ್ದಿದೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಪಕ್ಷವು ಬದರಿನಾಥ್ ಮತ್ತು ಮಂಗಳೌರ್ ಅನ್ನು ಗೆದ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾಯಗಂಜ್, ರಣಘಾಟ್ ದಕ್ಷಿಣ್, ಬಾಗ್ದಾ ಮತ್ತು ಮಾಣಿಕ್ತಾಲಾವನ್ನು ಗೆದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು