ಇತ್ತೀಚಿನ ಸುದ್ದಿ
71ನೇ ಅಖಿಲ ಭಾರತ ಸಹಕಾರ ಸಪ್ತಾಹ: ಆತ್ಮಶಕ್ತಿ ಸೌಧದಲ್ಲಿ ಧ್ವಜಾರೋಹಣ
15/11/2024, 19:05

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸಂಘದ ಸದಸ್ಯರಿಗೆ ಸಹಕಾರಿ ಸಪ್ತಾಹದ ಅಂಗವಾಗಿ 1000 ದಿನಗಳ ಠೇವಣಿಗಳಿಗೆ ಶೇ. 10.50 ವರಗೆ ಆಕರ್ಷಕ ಬಡ್ಡಿ ಯೋಜನೆಯನ್ನು ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 6262/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದೆಂದು ತಿಳಿಸಿದರು.
ಆತ್ಮವಿಶ್ವಾಸ ಮಕ್ಕಳ ವಿಶೇಷ ಠೇವಣಿ ಯೋಜನೆ ಹಾಗೂ 555_ ದಿವಸಗಳ ಠೇವಣಿ ಮೇಲೆ 9.70% ರ ವರೆಗೆ ಆಕರ್ಷಕ ಬಡ್ಡಿ ಕೊಡುಗೆಯನ್ನು ನೀಡುವುದಾಗಿ ತಿಳಿಸಿದರು.