9:27 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

7ನೇ ವೇತನ ಆಯೋಗ ಜಾರಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಮನವಿ

13/07/2024, 14:19

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಿಗೆ ದ.ಕ.ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಗಣೇಶ್ ರಾವ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಸರ್ಕಾರವು 7ನೇ ವೇತನ ಆಯೋಗ ನೀಡಿದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು,ಈಗಾಗಲೇ ಸರಕಾರ ನೀಡಿರುವ ಶೇ. 17% ಮಧ್ಯಂತರ ಪರಿಹಾರದೊಂದಿಗೆ ಆಯೋಗ ನೀಡಿದ ವರದಿಯನ್ನು ಜಾರಿಗೊಳಿಸುವುದು ಹಾಗೂ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಹಾಗೂ ಸರಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರಿಗೆ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲು ತಾವು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೆ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಶಾಸಕರಿಗೂ ಮನವಿಯ ಪ್ರತಿಯನ್ನು ಸಲ್ಲಿಸಿ,ಮುಂದಿನ ಅಧಿವೇಶನದಲ್ಲಿ ಈ ವಿಷಯಗಳ ಬಗ್ಗೆ ಧ್ವನಿ ಎತ್ತಲು ಮಾನ್ಯ ಶಾಸಕರಿಗೆ ಮನವಿ ಮಾಡಿದರು.ನಿಯೋಗದಲ್ಲಿ ಜಿಲ್ಲಾ ಕಾರ್ಯದರ್ಶಿ ಲಿಲ್ಲಿ ಪಾಯ್ಸ್,ಉದಯ ಕುಮಾರ್, ಗೌರವಾಧ್ಯಕ್ಷರು
ಸುಧೀರ್ ಉಚ್ಚಿಲ್, ಹಿರಿಯ ಉಪಾಧ್ಯಕ್ಷರು ಹರೀಶ್ ಕುಮಾರ್, ಹಿರಿಯ ಉಪಾಧ್ಯಕ್ಷರು ವಾಣಿ, ಉಪಾಧ್ಯಕ್ಷರು,ನಿಸಾರ್ ಅಹ್ಮದ್, ರಾಜ್ಯ ರಾಜ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು