10:17 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು