ಇತ್ತೀಚಿನ ಸುದ್ದಿ
8ನೇ ವರ್ಷದ ‘ಮಂಗಳೂರು ಕಂಬಳ’ಕ್ಕೆ ವೈಭವದ ಚಾಲನೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಗಣ್ಯರ ಉಪಸ್ಥಿತಿ
28/12/2024, 20:28
ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಉಗ್ರರ ಜತೆ ಸೆಣಸಾಡಿ ವೀರ ಮರಣವನ್ನಪ್ಪಿ ಹುತಾತ್ಮರಾದ ಸೇನಾಧಿಕಾರಿ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್ ಅವರು ಕಂಬಳಕ್ಕೆ ಚಾಲನೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಕುಲಪತಿ ಪಿ.ಎಲ್ ಧರ್ಮ, ,ಬ್ರಹ್ಮಬೈದರ್ಕಳ ಗರೋಡಿಯ ಚಿತ್ತರಂಜನ್, ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು ,ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ,ಜಯರಾಮ್ ಶೆಟ್ಟಿ, ಕಾರ್ಪೊರೇಟರ್ ಕಿರಣ್ ಕೋಡಿಕಲ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ,ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್ ಕವಿತಾ ಸನಿಲ್, ಬ್ರಿಗೇಡಿಯರ್ ಐ.ಎಂ ರೈ,
ಮಂಗಳೂರು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಉಪಾಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ,ಅಶೋಕ್ ಕೃಷ್ಣಾಪುರ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಕಾರ್ಯದರ್ಶಿ ಸಾಕ್ಷತ್ ಶೆಟ್ಟಿ, ಸಂಚಾಲಕರಾದ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಪ್ರಸಾದ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ್ ಕುಮಾರ್, ಪ್ರಕಾಶ್ ಗರೋಡಿ, ವಸಂತ್ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.