12:29 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ ವಿಶೇಷ ಪೂಜೆ

22/11/2025, 19:18

ತುಮಕೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನವಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲೆಂದು ಪಾವಗಡದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಹಾರೈಸಿದ್ದಾರೆ.


ತಾಲೂಕಿನ ಡಿಕೆ ಅಭಿಮಾನಿ ಬಳಗದ ವತಿಯಿಂದ ಪಾವಗಡದ ಪ್ರಸಿದ್ಧ ಶನಿ ಮಹಾತ್ಮ ದೇವಾಲಯದಲ್ಲಿ 91 ಕೆಜಿ ಎಳ್ಳಿನ ತುಲಾಭಾರ ಮಾಡುವ ಮೂಲಕ ದೇವರಿಗೆ ಸಮರ್ಪಣೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಇರುವ ಕುಜದೋಷ ಮತ್ತು ಶನಿ ದೋಷಗಳು ದೂರವಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಹಾದಿ ಸುಗಮವಾಗಲೆಂದು ತುಲಾಭಾರ ನಡೆಸಲಾಗಿದೆ.
ಇದೇ ವೇಳೆ ದೇವಾಲಯದ ನವಗ್ರಹಗಳಿಗೆ ವಿಶೇಷ ತೈಲಾಭಿಷೇಕವನ್ನು ಸಹ ನೆರವೇರಿಸಿ,ಶಿವಕುಮಾರ್ ಅವರ ರಾಜಕೀಯ ಜೀವನಕ್ಕೆ ಪ್ರಾರ್ಥಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹನುಮಂತರಾಯಪ್ಪ, ಡಿಕೆಶಿ ಅಭಿಮಾನಿ ಬಳಗ ಅಧ್ಯಕ್ಷ ಕಳರಾಜನಹಳ್ಳಿ ಗೋವಿಂದರಾಜು, ಅರಸೀಕೆರೆ ನಿವೃತ್ತ ಶಿಕ್ಷಕ ಚಿಕ್ಕಣ್ಣ, ಉಮಾಪತಿ, ಹರೀಶ್ ಸೇರಿದಂತೆ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು