ಇತ್ತೀಚಿನ ಸುದ್ದಿ
ಮಂಗಳೂರು: ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಸ್ಪೀಕರ್, ಉಸ್ತುವಾರಿ ಸಚಿವರ ಉಪಸ್ಥಿತಿ
28/10/2024, 22:13
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಪ್ರಾಶುಂಪಾಲರು ಡಾ|| ಮಮತಾ ಕೆ.ಪಿ. ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಆಯುಷ್ ಇಲಾಖೆಯ ಪ್ರಕಟಣೆ ತಿಳಿಸಿದೆ.