5:21 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಸ್ಪೀಕರ್, ಉಸ್ತುವಾರಿ ಸಚಿವರ ಉಪಸ್ಥಿತಿ

28/10/2024, 22:13

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.


ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಪ್ರಾಶುಂಪಾಲರು ಡಾ|| ಮಮತಾ ಕೆ.ಪಿ. ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಆಯುಷ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು