4:48 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ

18/12/2025, 18:49

ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.
ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.
ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು