ಇತ್ತೀಚಿನ ಸುದ್ದಿ
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ
20/12/2025, 12:05
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ವಿರಾಜಪೇಟೆ ಮುಖ್ಯ ರಸ್ತೆಯ ಮೂರ್ನಾಡು ಬಳಿಯ ಕಾಕೋಟುಪರಂಬುನಲ್ಲಿ ಟಿಪ್ಪರ್ ಮತ್ತು ಜೀಪ್ ನಡುವೆ ಅಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.


ಟಿಪ್ಪರ್ ವಿರಾಜಪೇಟೆಯಿಂದ ಕರ್ತವ್ಯ ನಿಮಿತ ಬಿಎಸ್ಸೆನ್ನೆಲ್ ಸಿಬ್ಬಂದಿಗಳು ತೆರಳುತ್ತಿದ್ದ ವೇಳೆ ಜೀಪಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಜೀಪಿನಲ್ಲಿದ್ದ ಎಲ್ಲರೂ ಗಂಭೀರವಾಗಿ ಗಾಯಗೊಂಡು ವಿರಾಜಪೇಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಕ್ಕಿ ರಭಸಕ್ಕೆ ಜೀಪು ಸಂಪೂರ್ಣ ನಜ್ಜುಗುಜ್ಜು ಆಗಿದ್ದು, ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.












