2:44 PM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

20/12/2025, 20:35

*ಅವರು ಕರೆದಾಗ ನಾನು, ಸಿಎಂ ಇಬ್ಬರೂ ಹೋಗುತ್ತೇವೆ. ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವುದಿಲ್ಲ*

*ನದಿ ಜೋಡಣೆ ಕುರಿತು ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಲು ಮಂಗಳವಾರ ದೆಹಲಿಗೆ ಪ್ರಯಾಣ*

*ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ, ಕೇಂದ್ರ ಅರಣ್ಯ ಹಾಗೂ ನಗರಾಭಿವೃದ್ಧಿ ಸಚಿವರ ಭೇಟಿಗೂ ಸಮಯ ಕೇಳಿರುವೆ*

ಬೆಂಗಳೂರು(reporterkarnataka.com): ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.
“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.
ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

*ಮಂಗಳವಾರ ದೆಹಲಿಗೆ ಪ್ರಯಾಣ:*
ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ತಿಳಿಸಿದರು.
ನಾಗಸಾಧುಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು