11:08 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಭಾಷಣ ವಿಧೇಯಕ ಸಹಕಾರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

20/12/2025, 20:47

ಮಂಗಳೂರು(reporterkarnataka.com): ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಮಂಡನೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ಮತ್ತು ರಾಜಕೀಯ ವಿಚಾರಗಳಲ್ಲಿ ಸಂಘರ್ಷ ಸೃಷ್ಟಿಸುವ ಮಾತುಗಳು ಹೆಚ್ಚಾಗುತ್ತಿವೆ. ಭಾಷಣ ಕೇಳಿ ಕೊಲೆ ಯತ್ನ ಮಾಡಿದ್ದಾರೆ. ಯುವಕರನ್ನು ಪ್ರಚೋದಿಸುವ ಕಾರ್ಯ ಹೆಚ್ಚಾಗುವ ಈ ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯ ಕಾಪಾಡುವುದು ಮತ್ತು ದ್ವೇಷ ಭಾಷಣದಿಂದ ಉಂಟಾಗುವ ಸಂಘರ್ಷಗಳನ್ನು ತಡೆಗಟ್ಟಲು ಈ ವಿಧೇಯಕ ತುಂಬಾ ಸಹಕಾರಿಯಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸಾರ ಅಥವಾ ಪ್ರಚಾರ ಹಾಗೂ ಅಪರಾಧಗಳನ್ನು ತಡೆಗಟ್ಟಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ವಿಧೇಯಕ ಅನುಕೂಲವಾಗಲಿದೆ.
ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ವಿಷಯ, ರಾಜಕೀಯ ಕಾರಣಗಳಿಂದಾಗಿ ದ್ವೇಷ ಭಾಷಣದಿಂದ ಅನೇಕ ಬಡ ಕುಟುಂಬದ ಯುವಕರು ಬಲಿಯಾಗುತ್ತಿದ್ದರು. ಇಂತಹ ಸಂದರ್ಭ ಈ ರೀತಿಯ ಮಸೂದೆಯ ಅನಿವಾರ್ಯವಾಯಿತೆ ಬಗ್ಗೆ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿದ್ದೆ. ಕಳೆದ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಹಾಸ್ ಶೆಟ್ಟಿ ಹಾಗೂ ಅಬ್ದುಲ್ ರಹಿಮಾನ್ ಹತ್ಯೆಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ನೇಮಕವಾದ ಸತ್ಯಶೋಧನಾ ಸಮಿತಿ ದಕ್ಷಿಣ ‌ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭ ದ್ವೇಷ ಭಾಷಣ ವಿರುದ್ಧ ಕಠಿಣ ಕಾನೂನು ತರುವ ಬಗ್ಗೆ ಚಿಂತಿಸಲಾಗುವುದು ಎಂಬ ಆಶ್ವಾಸನೆ ನೀಡಲಾಗಿತ್ತು. ಆ ಪ್ರಕಾರ ಇದೀಗ ಮಸೂದೆಗೆ ರಾಜ್ಯ ಸರ್ಕಾರದಿಂದ ಅಂಗೀಕಾರ ದೊರೆತ್ತಿರುವುದು ಶ್ಲಾಘನೀಯ‌. ಮುಂದಿನ ದಿನಗಳಲ್ಲಿ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲು ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು