8:14 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತಡೆಹಿಡಿದಿರುವ ಅನುದಾನ ಬಿಡುಗಡೆ ಮಾಡಿ: ರಾಜ್ಯ ಸರಕಾರಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

22/12/2025, 11:46

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳು ಅರ್ಧಕ್ಕೆ ನಿಂತಿದ್ದು, ಜನಸಾಮಾನ್ಯರ ಹಿತದೃಷ್ಟಿಯಿಂದಲಾದರೂ ತಡೆಹಿಡಿದಿರುವ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ್ದ ಅವರು, ರಸ್ತೆ ದುರಸ್ತಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ಅನುದಾನ ನೀಡಿಲ್ಲ. ಅಲ್ಲದೇ ಈ ಹಿಂದೆ ಬಜೆಟ್ ನಲ್ಲೇ ಘೋಷಣೆಯಾದಂತಹ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಗೆ 150 ಕೋಟಿ ಮಂಜೂರಾಗಿದ್ದರೂ ಇದುವರೆಗೆ ಕೇವಲ 35 ಕೋಟಿ ಬಿಡುಗಡೆಗೊಳಿಸಲಾಗಿದೆ. ಬಾಕಿ ಅನುದಾನವನ್ನು ತಡೆ ಹಿಡಿದ ಪರಿಣಾಮ ಕಾಮಗಾರಿಗಳೆಲ್ಲವೂ ಅರ್ಧಕ್ಕೆ ನಿಂತಿದ್ದು, ಕನಿಷ್ಠ ಅಗೆದಿರುವ ಗುಂಡಿಗಳನ್ನೂ ಸಹ ಮುಚ್ಚಲು ಸಾಧ್ಯವಾಗುತ್ತಿಲ್ಲ. ದಿನಬೆಳಗಾದರೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು ಅವರ ತಾಳ್ಮೆಗೂ ಮಿತಿಯಿದೆ ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಪಾಲಿಕೆಗೆ ವಿಶೇಷ ಅನುದಾನವೂ ಇಲ್ಲ, ಹಿಂದಿನ ಅನುದಾನಗಳನ್ನೂ ತಡೆಹಿಡಿಯಲಾಗಿದೆ ಎಂದರೆ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯ?. ಸದ್ಯ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತದ ಅವಧಿಯೂ ಅಂತ್ಯವಾಗಿದ್ದು ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿಗಳಾಗಿದ್ದಾರೆ. ಸಣ್ಣಪುಟ್ಟ ಕಾಮಗಾರಿಗಳಿಗೂ ಜಿಲ್ಲಾಧಿಕಾರಿಗಳನ್ನೇ ಕೇಳುವಂತಾಗಿದ್ದು ಕೂಡಲೇ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಶಾಸಕರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು