2:59 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ವಿಳಂಬವಿಲ್ಲದೆ ಹೆದ್ದಾರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಂಸದ ನಳಿನ್ ತಾಕೀತು

05/09/2021, 10:54

ಮಂಗಳೂರು (reporterkarnataka.com):

ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್  ಸೂಚಿಸಿದರು. 

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅರ್ಪಿಸಬೇಕು ಎಂದರು. 
ಆಗಾಗ್ಯೆ ಸಭೆ ನಡೆಸಿ, ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು, ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು. 
 ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್‍ನ ರತ್ನಾಕರ ಸಭೆಯಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು