5:53 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತುರುವಿಹಾಳ ಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆ ಆರಂಭ: ಶಾಸಕ ಬಸವನಗೌಡ ಚಾಲನೆ

05/09/2021, 13:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ತುರ್ವಿಹಾಳ ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ಗೆ  ಶಾಸಕ ಬಸವನಗೌಡ ತುರುವಿಹಾಳ ಚಾಲನೆ ನೀಡಿದರು.
ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸಾರ್ವಜನಿಕರ ಹಿತದೃಷ್ಟಿಯಿಂದ ಜನರಿಗೆ ಅನುಕೂಲವಾಗಲೆಂದು ಸಮರ್ಪಿಸಲಾಗಿದೆ.

ಅಂಬುಲೆನ್ಸ್ ವಾಹನ ಗರ್ಭಿಣಿ ಸ್ತ್ರೀಯರಿಗೆ, ವೃದ್ಧರಿಗೆ ಎಲ್ಲರಿಗೂ ಅನುಕೂಲವಾಗಲಿದೆ. ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ವಾಹನ ಸಂಚರಿಸಲಿದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಲ್ಲನಗೌಡ ದೇವರಮನಿ, ಸಿದ್ದನಗೌಡ ಮಾಟೂರ್,  ಫಾರೂಕ್ ಸಾಬ್,  ಉಮರ ಸಾಬ್,  ಭೀಮದಾಸರ, ಪಪಂ ಮಾಜಿ ಉಪಾಧ್ಯಕ್ಷ ಬಾಪುಗೌಡ ಕರಿಯಪ್ಪ, ಮಾಜಿ ಸದಸ್ಯ ಅಬುತ್ರಾಬ್ ರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2021-22 ನೇ  ಸಾಲಿನ ಅನುದಾನದಲ್ಲಿ ತುರುವಿಹಾಳ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು