7:36 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪಂಚ ಗ್ಯಾರಂಟಿ ಯೋಜನೆ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ನೀಡಿದೆ: ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ

24/12/2025, 11:12

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ. ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮಂಗಳವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.


ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಆರ್ಥಿಕ ಸ್ವಾತಂತ್ರ್ಯದಲ್ಲಿ ಇಂದಿರಾ ಗಾಂಧಿಯವರ ಕೊಡುಗೆ ಸ್ಮರಣೀಯ ಎಂದು ಹೇಳಿದರು.
ರಾಜ್ಯದ ಜನತೆಗೆ ಕನಿಷ್ಠ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮೂದಲಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ ಎಂದು ಹೇಳಿದರು.
ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಎಚ್.ವಿ. ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ವಿನಃ ರಾಜ್ಯದಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಜನಸಮುದಾಯಕ್ಕೆ ಕೊಳ್ಳುವ ಶಕ್ತಿ ಜಾಸ್ತಿ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಕಹ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ,ಅಪರ ಜಿಲ್ಲಾಧಿಕಾರಿ ರಾಜು ಕೆ., ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿವಿಧ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಜಯಂತಿ ಬಿ.ಎ., ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ, ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಲಾಯಿತು.ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು